ಗುಜರಾತ್, , ಜೂ 18 (DaijiworldNews/MS): ಪ್ರಧಾನಮಂತ್ರಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ ಅವರು ಶನಿವಾರ 100ನೇ ವಸಂತಕ್ಕೆ ಕಾಲಿಟ್ಟಿದ್ದು, ಈ ಹಿನ್ನೆಲೆಯಲ್ಲಿ ಗುಜರಾತ್ ಪ್ರವಾಸದಲ್ಲಿರುವ ಮೋದಿಯವರು ತಮ್ಮ ನಿವಾಸಕ್ಕೆ ಭೇಟಿ ನೀಡಿ ತಾಯಿಯ ಆಶೀರ್ವಾದ ಪಡೆದುಕೊಂಡಿದ್ದಾರೆ.
ತಾಯಿಯ ಹುಟ್ಟುಹಬ್ಬದಂದು ಆಶೀರ್ವಾದ ಪಡೆಯುವ ಸಲುವಾಗಿ ಹಾಗೂ ಅನೇಕ ಕಾರ್ಯಕ್ರಮಗಳನ್ನು ಉದ್ಘಾಟಿಸುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಯವರು ಇಂದು ಗುಜರಾತ್ ರಾಜ್ಯಕ್ಕೆ ಭೇಟಿ ನೀಡಿದ್ದಾರೆ.
ಇನ್ನೊಂದೆಡೆ ತಾಯಿ ಹೀರಾಬೆನ್ ಮೋದಿ 100ನೇ ವರ್ಷಕ್ಕೆ ಕಾಲಿಟ್ಟಿರುವ ಶುಭ ಸಂದರ್ಭದಲ್ಲಿ ಮೋದಿಯವರು ತಾಯೊಯೊಂದಿಗಿನ ತಮ್ಮ ಜೀವನವನ್ನು ನೆನಪಿಸಿಕೊಳ್ಳುವ ಹೃದಯಸ್ಪರ್ಶಿ ಪತ್ರ ಬರೆದಿದ್ದು ಇದನ್ನು ಟ್ವೀಟರ್ ನಲ್ಲಿ ಹಂಚಿಕೊಂಡಿದ್ದಾರೆ.
' ಮಾ (ಅಮ್ಮ)' ಎಂಬುದು ಕೇವಲ ಪದವಲ್ಲ… ಆದರೆ ಇದು ಭಾವನೆಗಳ ವ್ಯಾಪ್ತಿಯನ್ನು ಸೆರೆ ಹಿಡಿಯುತ್ತದೆ. ಅವಳು ಯಾವುದೇ ಚಿನ್ನದ ಆಭರಣಗಳನ್ನು ಧರಿಸಿರುವುದನ್ನು ನಾನು ನೋಡಿಲ್ಲ ಮತ್ತು ಅವಳಿಗೆ ಆಸಕ್ತಿಯೂ ಇಲ್ಲ. ಮೊದಲಿನಂತೆಯೇ, ಅವಳು ತನ್ನ ಸಣ್ಣ ಕೋಣೆಯಲ್ಲಿ ಅತ್ಯಂತ ಸರಳವಾದ ಜೀವನಶೈಲಿಯನ್ನು ಮುಂದುವರಿಸುತ್ತಾಳೆ, ಎನ್ನುವ ಮೂಲಕ ಸರಳ ಜೀವನ ಶೈಲಿಯನ್ನು ಬಣ್ಣಿಸಿದ್ದಾರೆ.
ಮಳೆಗಾಲದಲ್ಲಿ ನಮ್ಮ ಮೇಲ್ಛಾವಣಿ ಸೋರಿ ಮನೆಯೊಳಗೆ ನೀರು ಬರುತ್ತಿತ್ತು. ಮಳೆ ನೀರನ್ನು ಸಂಗ್ರಹಿಸಲು ತಾಯಿ ಬಕೆಟ್ ಮತ್ತು ಪಾತ್ರೆಗಳನ್ನು ಸೋರಿಕೆಯ ಕೆಳಗೆ ಇಡುತ್ತಿದ್ದರು. ಈ ಪ್ರತಿಕೂಲ ಪರಿಸ್ಥಿತಿಯಲ್ಲೂ ತಾಯಿ ಸ್ಥೈರ್ಯದ ಪ್ರತೀಕವಾಗಿದ್ದರು . ಔಪಚಾರಿಕವಾಗಿ ಶಿಕ್ಷಣ ಪಡೆಯದೆ ಕಲಿಯಲು ಸಾಧ್ಯ ಎಂದು ನಾನು ತಾಯಿಯಿಂದ ಅರಿತುಕೊಂಡೆ. 'ಅವಳ ಆಲೋಚನಾ ಪ್ರಕ್ರಿಯೆ ಮತ್ತು ದೂರದೃಷ್ಟಿಯ ಚಿಂತನೆಯು ಯಾವಾಗಲೂ ನನ್ನನ್ನು ಆಶ್ಚರ್ಯಗೊಳಿಸುತ್ತದೆ' ಎಂದು ಬರೆದುಕೊಂಡಿದ್ದಾರೆ.