ಹೈದರಾಬಾದ್, ಜೂ 18 (DaijiworldNews/HR): ಅಗ್ನಿಪಥ ಯೋಜನೆ ವಿರುದ್ಧ ಪ್ರತಿಭಟನೆಯ ವೇಳೆ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದು ಅವರ ಕುಟುಂಬಕ್ಕೆ 25 ಲಕ್ಷ ರೂ. ನೆರವನ್ನು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಘೋಷಿಸಿದ್ದಾರೆ.
ತೆಲಂಗಾಣದ ಸಿಕಂದರಾಬಾದ್ನಲ್ಲಿ ರಾಕೇಶ್(19) ಮೃತಪಟ್ಟಿರುವ ಯುವಕ.
ಆತ ಪ್ರತಿಭಟನೆಯ ವೇಳೆ ರೈಲಿಗೆ ಬೆಂಕಿ ಹಚ್ಚಿದ ಗುಂಪೊಂದರ ಮೇಲೆ ಪೊಲೀಸರು ಗುಂಡು ಹಾರಿಸಿದ್ದರಿಂದ ಹತ್ಯೆಗೀಡಾಗಿದ್ದಾನೆ.
ಇನ್ನು ಆತನ ಕುಟುಂಬಕ್ಕೆ 25 ಲಕ್ಷ ರೂ. ಆರ್ಥಿಕ ನೆರವು ನೀಡಲಾಗುವುದು ಮತ್ತು ಅವರ ಕುಟುಂಬದ ಸದಸ್ಯರೊಬ್ಬರಿಗೆ ಸರ್ಕಾರಿ ಉದ್ಯೋಗ ನೀಡಲಾಗುವುದು ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ.