ನವದೆಹಲಿ, ಜೂ 18 (DaijiworldNews/DB): ಭೂಗತ ಪಾತಕಿ ದಾವೂದ್ ಇಬ್ರಾಹಿಂ ಗ್ಯಾಂಗ್ನಿಂದ ತಮಗೆ ಬೆದರಿಕೆ ಬಂದಿದೆ ಎಂದು ಬಿಜೆಪಿ ಸಂಸದೆ ಪ್ರಗ್ಯಾ ಸಿಂಗ್ ಠಾಕೂರ್ ಪೊಲೀಸರಿಗೆ ದೂರು ನೀಡಿದ್ದಾರೆ.
ದಾವೂದ್ ಇಬ್ರಾಹಿಂ ಸಹೋದರ ಇಕ್ಬಾಲ್ ಕಸ್ಕಾರ್ಗೆ ಸಂಬಂಧಿಸಿದ ವ್ಯಕ್ತಿ ಎಂದು ಹೇಳಿಕೊಂಡ ಓರ್ವ ತಮಗೆ ಕರೆ ಮಾಡಿದ್ದು, ಮುಸ್ಲಿಮರ ವಿರುದ್ದ ದ್ವೇಷ ಹರಡತ್ತಿರುವುದಕ್ಕಾಗಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಪ್ರಗ್ಯಾ ಸಿಂಗ್ ಟಿಟಿ ನಗರ ಪೊಲೀಸ್ ಠಾಣೆಯಲ್ಲಿ ದಾಖಲಿಸಿರುವ ದೂರಿನಲ್ಲಿ ತಿಳಿಸಿದ್ದಾರೆ.
ಬೆದರಿಕೆ ಕರೆ ಮಾಡಿದ ವ್ಯಕ್ತಿಯೊಂದಿಗೆ ಪ್ರಗ್ಯಾ ಸಿಂಗ್ ಎರಡು ನಿಮಿಷ ಕಾಲ ಮಾತನಾಡಿದ್ದಾರೆ. ಈ ವೇಳೆ ವೀಡಿಯೋವನ್ನೂ ಮಾಡಲಾಗಿದೆ ಎಂದು ಹೇಳಲಾಗಿದೆ.