ನವದೆಹಲಿ, ಜೂ 19 (DaijiworldNews/HR): ದೇಶಾದ್ಯಂತ ಕೊರೊನಾ ಸೋಂಕು ಕೊಂಚ ಕಡಿಮೆ ಪ್ರಮಾಣದಲ್ಲಿ ದಾಖಲಾಗಿದ್ದು, ಕಳೆದ 24 ಗಂಟೆಯಲ್ಲಿ 12,899 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.
ಕೇಂದ್ರೆಅ ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ, ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಕುಸಿತ ಕಂಡಿದ್ದು, 24 ಗಂಟೆಯಲ್ಲಿ 15 ಮಂದಿ ಸೋಂಕಿಗೆ ಬಲಿಯಾಗಿದ್ದು, ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 524855 ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 72474 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 8518 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 42699363 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.