ಮೈಸೂರು, ಜೂ 19 (DaijiworldNews/HR): ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರಿಗೆ ಭೇಟಿ ನೀಡಲಿದ್ದು, ಈ ವೇಳೆ ಚಾಮುಂಡಿಬೆಟ್ಟಕ್ಕೆ ತೆರಳಲಿ ನಾಡದೇವತೆ ಚಾಮುಂಡೇಶ್ವರಿಯ ದರ್ಶನ ಪಡೆಯಲಿದ್ದಾರೆ. ಈ ಹಿನ್ನೆಯಲ್ಲಿ ನಾಳೆ ಮಧ್ಯಾಹ್ನ 12ರಿಂದ ಚಾಮುಂಡಿಬೆಟ್ಟಕ್ಕೆ ಭಕ್ತರಿಗೆ ನಿರ್ಬಂಧ ವಿಧಿಸಲಾಗಿದೆ.
ನಾಳೆ ಬೆಂಗಳೂರಿಗೂ ಮೋದಿ ಭೇಟಿ ನೀಡಲಿದ್ದು, ಹಲವಾರು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.
ಇನ್ನು ಮೋದಿಯವರ ಭದ್ರತಾ ದೃಷ್ಟಿಯಿಂದ ಅವರು ಹಾದು ಹೋಗಲಿರುವ ಮಾರ್ಗಗಳ ಸುತ್ತಮುತ್ತ ಬರುವ ನಗರದ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ರಾಜ್ಯ ಸರ್ಕಾರ ರಜೆ ಘೋಷಿಸಿದೆ. ಈ ಕುರಿತು ಶನಿವಾರ ಸರ್ಕಾರಿ ಆದೇಶ ಹೊರಡಿಸಲಾಗಿದೆ.