ಪಾಟ್ನಾ, ಜೂ 19 (DaijiworldNews/DB): ಪಾಟ್ನಾ-ದೆಹಲಿ ನಡುವೆ ಹಾರಾಟ ನಡೆಸುತ್ತಿದ್ದ ಸ್ಪೈಸ್ ಜೆಟ್ ವಿಮಾನದಲ್ಲಿ ಬೆಂಕಿಕಾಣಿಸಿಕೊಂಡ ಹಿನ್ನೆಲೆಯಲ್ಲಿ ವಿಮಾನ ತುರ್ತು ಭೂಸ್ಪರ್ಶ ಮಾಡಿರುವ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದೆ.
ಪಾಟ್ನಾದಿಂದ ದೆಹಲಿಗೆ 185 ಪ್ರಯಾಣಿಕರನ್ನು ಹೊತ್ತು ವಿಮಾನ ಸಂಚರಿಸುತ್ತಿತ್ತು. ಈ ವೇಳೆ ವಿಮಾನದ ಎಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತತ್ಕ್ಷಣ ಪೈಲಟ್ ಸಮಯ ಪ್ರಜ್ಞೆ ಮೆರೆದು ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಿದ್ದಾರೆ. ಇದರಿಂದ ಸಂಭಾವ್ಯ ದುರಂತ ತಪ್ಪಿದಂತಾಗಿದೆ ಎಂದು ವರದಿಯಾಗಿದೆ.
ಭೂಸ್ಪರ್ಶದ ಬಳಿಕ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಲಾಯಿತು. ವಿಮಾನದಲ್ಲಿದ್ದ 185 ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ ಎಂದು ತಿಳಿದು ಬಂದಿದೆ.