ಬೆಂಗಳೂರು, ಜೂ 19 (DaijiworldNews/HR): ಸೈನಿಕರು ಇಷ್ಟು ವರ್ಷ ಎಂತಹ ಪರಿಸ್ಥಿತಿ ಬಂದರೂ ದೇಶವನ್ನು ರಕ್ಷಣೆ ಮಾಡಲಿಲ್ಲವ? ಆ ಮಕ್ಕಳು ಡಿಗ್ರಿ ಪಾಸ್ ಮಾಡಬಾರದಾ? ಮಂತ್ರಿಗಳು ಅವರ ಮಕ್ಕಳನ್ನು ಅಗ್ನಿಪಥ್ ಯೋಜನೆಗೆ ಕಳುಹಿಸಲಿ ನೋಡೋಣ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂತ್ರಿಗಳು ಅವರ ಮಕ್ಕಳನ್ನು ಅಗ್ನಿಪಥ್ ಯೋಜನೆಗೆ ಕಳುಹಿಸಲಿ ನೋಡೋಣ. ಮಂತ್ರಿಗಳ ಮಕ್ಕಳು ಇಂಜಿನಿಯರ್, ಡಾಕ್ಟರ್ ಆಗಬೇಕು ಬಡವರ ಮಕ್ಕಳು ಮಾತ್ರ ಸೆಕ್ಯುರಿಟಿ ಗಾರ್ಡ್ಸ್ ಗಳಾಗಬೇಕು? ಎಂದು ಪ್ರಶ್ನಿಸಿದ್ದಾರೆ.
ಇನ್ನು ಮೈಸೂರಿಗೆ ಪ್ರಧಾನಿ ಮೋದಿ ಭೇಟಿ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ರಜೆ ಕೊಟ್ಟಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಕಾಲೇಜುಗಳಿಗೆ ಯಾಕೆ ರಜೆ ಕೊಡಬೇಕು? ವಿದ್ಯಾರ್ಥಿಗಳು ಗಲಾಟೆ ಮಾಡ್ತಾರಾ ? ರಸ್ತೆಯಲ್ಲಿ ಏನು ಭದ್ರತೆ ಕೊಡಬೇಕೋ ಕೊಡಲಿ ರೋಡ್ ಶೋ ನಡೆಸಿ ರಾಜಕೀಯ ಮಾಡಿ ಆದರೆ ವಿದ್ಯಾರ್ಥಿಗಳನ್ನು ಯಾಕೆ ಅನುಮಾನದಿಂದ ನೋಡುತ್ತಿದ್ದೀರಿ ಎಂದಿದ್ದಾರೆ.