ಬೆಂಗಳೂರು, ಜೂ 19 (DaijiworldNews/SM): ಕಾಂಗ್ರೆಸ್ ಎಂದೆಂದಿಗೂ ಪರಿಸ್ಥಿತಿಯ ಲಾಭವನ್ನು ಪಡೆಯುವ ಪಕ್ಷವಾಗಿದೆ. ಬೆಂಕಿಗೆ ತುಪ್ಪ ಹಾಕುವ ಕೆಲಸವನ್ನು ದೇಶದಲ್ಲಿ ಮಾಡುತ್ತಿದೆ ಎನ್ನುವುದಕ್ಕೆ ಖಾನಾಪುರ ಶಾಸಕರು ಧರಣಿ ಮಾಡುತ್ತಿರುವುದು ಸಾಕ್ಷಿಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅಗ್ನಿಪಥ್ ಒಂದು ವಿನೂತನ ಕಾರ್ಯಕ್ರಮ. ಇಡೀ ಜಗತ್ತಿನಲ್ಲಿ ಯುವಕರಿಗೆ ಮಿಲಿಟರಿ ತರಬೇತಿ ನೀಡುವ ವ್ಯವಸ್ಥೆ ಇದರಲ್ಲಿ ಒಳಗೊಂಡಿದೆ. 17 - 21 ವರ್ಷ ಉತ್ತಮ ತರಬೇತಿ ಪಡೆದರೆ, ಬೇರೆ ಅವಕಾಶಗಳು ಒದಗಿಬರುತ್ತವೆ. ಮಿಲಿಟರಿ ಹಾಗೂ ಅರೆಮಿಲಿಟರಿ ಪಡೆಗಳಲ್ಲಿ ಅವಕಾಶ ಸಿಗಲಿದೆ ಎಂದರು.
ಪರೀಕ್ಷೆ ಬರೆದವರಿಗೆ ಆತಂಕ ಇದೆ. ಅದನ್ನು ಕೇಂದ್ರ ಸರ್ಕಾರ ಗಮನಿಸಿ ಪರಿಹಾರ ನೀಡುವ ವಿಶ್ವಾಸವಿದೆ. ಆದರೆ ಈ ನೆಪದಲ್ಲಿ ರೈಲುಗಳಿಗೆ ಬೆಂಕಿ ಹಚ್ಚುವುದು, ಖಂಡಿತವಾಗಿಯೂ ಕ್ಷಮಿಸಲಾಗದ ಅಪರಾಧ. ಪ್ರಯಾಣಿಕರಿಗೆ ತೊಂದರೆ, ಆಸ್ತಿಪಾಸ್ತಿ ನಷ್ಟವಾಗಿದೆ. ಜವಾಬ್ದಾರಿ ಇರುವವರು ಯಾರೂ ಈ ರೀತಿ ಮಾಡುವುದಿಲ್ಲ. ಇದೊಂದು ರಾಜಕೀಯ ಪ್ರೇರಿತ ಕೃತ್ಯ. ಜನ ಸ್ವಲ್ಪ ದಿನಗಳಲ್ಲಿಯೇ ಅರ್ಥ ಮಾಡಿಕೊಳ್ಳುತ್ತಾರೆ ಎಂದರು.