ಜಮ್ಮು ಮತ್ತು ಕಾಶ್ಮೀರ, ಜೂ 20 (DaijiworldNews/MS): ಜಮ್ಮು ಮತ್ತು ಕಾಶ್ಮೀರದಲ್ಲಿ ಸೋಮವಾರ ನಡೆದ ಪ್ರತ್ಯೇಕ ಎನ್ಕೌಂಟರ್ಗಳಲ್ಲಿ ಒಟ್ಟು ಏಳು ಉಗ್ರರು ಹತರಾಗಿದ್ದಾರೆ. ಕೇಂದ್ರಾಡಳಿತ ಪ್ರದೇಶದ ಪುಲ್ವಾಮಾ, ಕುಲ್ಗಾಮ್ ಮತ್ತು ಕುಪ್ವಾರದಲ್ಲಿ ಎನ್ಕೌಂಟರ್ ನಡೆಸಲಾಗಿದೆ.
ಪುಲ್ವಾಮಾದಲ್ಲಿ ಸೋಮವಾರ ಮುಂಜಾನೆ ಭದ್ರತಾ ಪಡೆಗಳು ನಡೆಸಿದ ಎನ್ ಕೌಂಟರ್ ನಲ್ಲಿ ಒಬ್ಬ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ. ಗುಂಡಿನ ಚಕಮಕಿಯ ಕುರಿತು ಪ್ರತಿಕ್ರಿಯಿಸಿದ ಜಮ್ಮು ಮತ್ತು ಕಾಶ್ಮೀರ ಪೊಲೀಸರು, ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಹೇಳಿದ್ದಾರೆ.
ಕುಲ್ಗಾಮ್ ಮತ್ತು ಕುಪ್ವಾರದಲ್ಲಿ ನಡೆಯುತ್ತಿರುವ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯಲ್ಲಿ ಕುಪ್ವಾರದಲ್ಲಿ ಪೊಲೀಸರು ಭಾನುವಾರ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ನಾಲ್ವರು ಭಯೋತ್ಪಾದಕರನ್ನು ಹತ್ಯೆಮಾಡಲಾಗಿದೆ.
ಸೋಮವಾರ, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಎನ್ ಕೌಂಟರ್ ನಲ್ಲಿ ಇನ್ನಿಬ್ಬರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಹೇಳಿದ್ದು, ಸ್ಥಳದಿಂದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.