ನವದೆಹಲಿ, ಜೂ 20 (DaijiworldNews/HR): ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಸತತ ಮೂರು ದಿನ ರಾಹುಲ್ ಗಾಂಧಿಯವರನ್ನಿ ವಿಚಾರಣೆ ನಡೆಸುತ್ತಿದ್ದು, ಇ.ಡಿ ವಿಚಾರಣೆಯನ್ನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ನಡೆಸುತ್ತಿರುವ ಪ್ರತಿಭಟನೆ ಮುಂದುವರೆದಿದೆ.
ದೆಹಲಿಯ ಜಂತರ್ ಮಂತರ್ನಲ್ಲಿ ಇಂದು ಛತ್ತೀಸ್ಗಢ ಮುಖ್ಯಮಂತ್ರಿ ಭೂಪೇಶ್ ಬಾಘೇಲ್, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಮಾಜಿ ಸಚಿವ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಕಾಂಗ್ರೆಸ್ನ ಹಿರಿಯ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ.
ಇನ್ನು ಇಂದು ಬೆಳಗ್ಗೆ 11.30ರ ಸುಮಾರಿಗೆ ರಾಹುಲ್ ಗಾಂಧಿ ಇ.ಡಿ. ಕಚೇರಿಗೆ ತೆರಳಿದ್ದು, ಸಹೋದರಿ ಪ್ರಿಯಾಂಕಾ ಗಾಂಧಿ ಕೂಡ ಅವರಿಗೆ ಸಾಥ್ ನೀಡಿದ್ದಾರೆ.