ಬೆಂಗಳೂರು, ಜೂ 20 (DaijiworldNews/HR): ಆಕ್ಸಿಜನ್ ಕೊಡುವುದಕ್ಕೆ ಆಗದವರು ಈಗ ಯೋಗ ಮಾಡುವುದಕ್ಕೆ ಬಂದಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಕರ್ನಾಟಕ ಭೇಟಿ ಕುರಿತಾಗಿ ವ್ಯಂಗ್ಯವಾಡಿದ್ದಾರೆ.
ಈ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ 2019 ಹಾಗೂ2020 ರಲ್ಲಿ ಭಾರಿ ಪ್ರವಾಹ ಬಂದಾಗ ಪ್ರಧಾನಿಯವರು ಇಲ್ಲಿಗೆ ಬರಲಿಲ್ಲ,ನೊಂದ ಜನರಿಗೆ ಸಾಂತ್ವನ ಹೇಳಲಿಲ್ಲ. ಆದರೆ ಈಗ ಅವರಿಗರ ಕರ್ನಾಟಕದ ನೆನಪಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಇನ್ನು ಕೊರೊನಾ ಸಮಯದಲ್ಲಿ ರಾಜ್ಯದ ಜನರಿಗೆ ಪ್ರಧಾನಿ ಆಕ್ಸಿಜನ್ ಕೊಟ್ಟರಾ?ಎಂದು ಪ್ರಶ್ನಿಸಿರುವ ಅವರು, ಹೈಕೋರ್ಟ್ ಹೇಳಿದರೂ ಆಕ್ಸಿಜನ್ ಕೊಟ್ಟಿರಲಿಲ್ಲ. ಸುಪ್ರೀಂಕೋರ್ಟ್ ಚಾಟಿಬೀಸಿದ ಮೇಲೆ ಕೊಟ್ಟರು. ಆಕ್ಸಿಜನ್ ಇಲ್ಲದೆ ಸಾವಿರಾರು ಜನ ಸತ್ತರು.ಚಾಮರಾಜನಗರದಲ್ಲಿ 36 ಜನ ಸಾವನ್ನಪ್ಪಿದರು.ರಾಜ್ಯದ ಬೇರೆಡೆಯೂ ಆಕ್ಸಿಜನ್ ಇಲ್ಲದೆ ಸತ್ತರು .ಇದಕ್ಕೆಲ್ಲ ಯಾರು ಕಾರಣ ? ಇದೇ ಮೋದಿಯವರು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.