ಪಂಜಾಬ್, ಜೂ 20 (DaijiworldNews/HR): 16 ವರ್ಷಕ್ಕಿಂತ ಮೇಲ್ಪಟ್ಟ ಮುಸ್ಲಿಂ ಯುವತಿ ತನ್ನ ಆಯ್ಕೆಯ ವ್ಯಕ್ತಿಯೊಂದಿಗೆ ಮದುವೆ ಮಾಡಿಕೊಳ್ಳಬಹುದು ಎಂದು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಸೋಮವಾರ ತೀರ್ಪು ನೀಡಿದೆ.
16 ಮತ್ತು 21 ವರ್ಷ ವಯಸ್ಸಿನ ಮುಸ್ಲಿಂ ಸಮುದಾಯದ ದಂಪತಿ ಅವರ ಕುಟುಂಬ ಸದಸ್ಯರಿಂದ ರಕ್ಷಣೆ ನೀಡಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಈ ಆದೇಶ ನೀಡಿದೆ.
ನ್ಯಾಯಮೂರ್ತಿ ಜಸ್ಜಿತ್ ಸಿಂಗ್ ಬೇಡಿ, ಅರ್ಜಿದಾರರು (ದಂಪತಿಗಳು) ತಮ್ಮ ಕುಟುಂಬದವರ ಇಚ್ಛೆಗೆ ವಿರುದ್ಧವಾಗಿ ವಿವಾಹವಾದರು ಎಂಬ ಕಾರಣಕ್ಕಾಗಿ ಭಾರತೀಯ ಸಂವಿಧಾನದಲ್ಲಿ ಪ್ರತಿಪಾದಿಸಿರುವ ಮೂಲಭೂತ ಹಕ್ಕುಗಳಿಂದ ವಂಚಿತರಾಗಲು ಸಾಧ್ಯವಿಲ್ಲ ಎಂದಿದ್ದಾರೆ.