ನವದೆಹಲಿ, ಜೂ 20 (DaijiworldNews/HR): ಪಂಜಾಬಿ ಗಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಇಬ್ಬರು ಶಾರ್ಪ್ ಶೂಟರ್ ಗಳನ್ನು ಬಂಧಿಸಿದ್ದಾರೆ.
ಬಂಧಿತರನ್ನು ಪ್ರಿಯವ್ರತ್ ಫೌಜಿ ಮತ್ತು ಕಾಶಿಶ್ ಎಂದು ಗುರುತಿಸಲಾಗಿದ್ದು, ಅವರಿಂದ ಸ್ಪೋಟಕಗಳು ಮತ್ತು ಶಸ್ತಾಸ್ತ್ರಗಳನ್ನು ವಶಕ್ಕೆ ಪಡೆದಿದ್ದಾರೆ.
ಇನ್ನು ಮೂಸೆವಾಲಾ ಕೊಲೆ ಪ್ರಕರಣದಲ್ಲಿ ಗ್ಯಾಂಗ್ ಸ್ಟರ್ ಗೋಲ್ಡಿ ಬ್ರಾರ್ ನೊಂದಿಗೆ ನೇರ ಸಂಪರ್ಕದಲ್ಲಿದ್ದ ಪ್ರಿಯವ್ರತ್ ಶೂಟರ್ ಗಳ ತಂಡವನ್ನು ಮುನ್ನಡೆಸಿದ್ದು, ಅಲ್ಲದೆ ಪ್ರಿಯವ್ರತ್ ಫೌಜಿ ಈ ಹಿಂದೆ ಎರಡು ಕೊಲೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎನ್ನಲಾಗಿದೆ.