ಬೆಳಗಾವಿ, ಜೂ 21 (DaijiworldNews/HR): ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯ ಕಾಲಿಗೆ ಇಂದು ಬೆಳಗ್ಗೆ ಪೊಲೀಸರು ಗುಂಡು ಹೊಡೆದು ಬಂಧಿಸಿದ್ದಾರೆ.
ರಾಜು ದೊಡ್ಡಬೊಮ್ಮನವರ ಎಂಬ ರಿಯಲ್ ಎಸ್ಟೇಟ್ ಉದ್ಯಮಿ ಕೊಲೆಯ ಆರೋಪ ಹೊತ್ತಿರುವ ವಿಶಾಲಸಿಂಗ್ ಚವ್ಹಾಣ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ.
ವೀರಭದ್ರ ನಗರದ ಮನೆಯೊಂದರಲ್ಲಿ ವಿಶಾಲಸಿಂಗ್ ಚವ್ಹಾಣ ಅವಿತು ಕುಳಿತ ಬಗ್ಗೆ ಮಾಹಿತಿ ಸಿಕ್ಕಿದ್ದು, ನಸುಕಿನ 5ರ ಸುಮಾರಿಗೆ ಆರೋಪಿಯನ್ನು ಬಂಧಿಸಲು ಹೋದಾಗ ಪೊಲೀಸರ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ. ಈ ವೇಳೆ ಗುಂಡು ಹಾರಿಸಿ ಬಂಧಿಸಿದ್ದಾರೆ.
ಇನ್ನು ಎಸಿಪಿ ನಾರಾಯಣ ಭರಮನಿ ಅವರು ಹೊಡೆದ ಗುಂಡು ಆರೋಪಿ ಕಾಲಿಗೆ ಬಿದ್ದಿದ್ದು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ನೀಡಲಾಗುತ್ತಿದೆ.