ನವದೆಹಲಿ, ಜೂ 21 (DaijiworldNews/HR): ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಅಕ್ರಮ ವರ್ಗಾವಣೆಯಲ್ಲಿ ಸಂಬಂಧಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಐದನೇ ದಿನದ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯ (ಇಡಿ) ಕಚೇರಿಗೆ ಆಗಮಿಸಿದ್ದಾರೆ.
ಒಂದು ದಿನದ ವಿರಾಮದ ನಂತರ ರಾಹುಲ್ ಗಾಂಧಿ ಅವರ ವಿಚಾರಣೆ ಸೋಮವಾರ ಪುನರಾರಂಭಗೊಂಡಿದ್ದು, ಆಸ್ಪತ್ರೆಗೆ ದಾಖಲಾದ ಅವರ ತಾಯಿ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಲು ಅನುವು ಮಾಡಿಕೊಟ್ಟಿದೆ.
ಇನ್ನು ನಿನ್ನೆ ಡಿಸ್ಚಾರ್ಜ್ ಆದ ಸೋನಿಯಾ ಗಾಂಧಿ ಅವರಿಗೂ ಇಡಿ ಸಮನ್ಸ್ ಜಾರಿ ಮಾಡಿದ್ದು, ಅನಾರೋಗ್ಯದ ಹಿನ್ನೆಲೆಯಲ್ಲಿ ಏಜೆನ್ಸಿಯ ಮುಂದೆ ಹಾಜರಾಗಲು ಅವರಿಗೆ ಜೂನ್ 23 ರವರೆಗೆ ಸಮಯ ನೀಡಲಾಗಿದೆ.