ಬೆಂಗಳೂರು, ಜೂ 21 (DaijiworldNews/DB): ಮರು ಪರಿಷ್ಕರಣೆ ಮಾಡಿದ ಪಠ್ಯಪುಸ್ತಕಗಳನ್ನು ಹಿಂಪಡೆದು ಹಿಂದಿನ ಪಠ್ಯವನ್ನೇ ಮುಂದುವರಿಸವಬೇಕೆಂದು ಒತ್ತಾಯಿಸಿ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮಂಗಳವಾರ ಪತ್ರ ಬರೆದಿದ್ದಾರೆ.
ರೋಹಿತ್ ಚಕ್ರತೀರ್ಥ ನೇತೃತ್ವದಲ್ಲಿ ಮರು ಪರಿಷ್ಕರಣೆ ಮಾಡಿದ ಪಠ್ಯಗಳನ್ನು ಸರ್ಕಾರ ಹಿಂಪಡೆಯಬೇಕು. ಚಿಂತಕ ಬರಗೂರು ರಾಮಚಂದ್ರಪ್ಪ ಅವರ ನೇತೃತ್ವದ ಎಲ್ಲ 27 ಸಮಿತಿಗಳು ಪರಿಷ್ಕರಿಸಿದ್ದ ಹಳೆಯ ಪಠ್ಯವನ್ನು ಮುಂದುವರಿಸಬೇಕು. ಈ ಬಾರಿಯ ಸಮಿತಿ ಅಧ್ಯಕ್ಷರು ರಾಷ್ಟ್ರಕವಿ ಕುವೆಂಪು ವಿರಚಿತ ನಾಡಗೀತೆಗೆ ಅವಮಾನ ಮಾಡಿದ್ದಾರೆ. ಅಲ್ಲದೆ ನಾಡಧ್ವಜವನ್ನು ಒಳುಡುಪಿಗೆ ಹೋಲಿಸುವ ಮೂಲಕ ಅವರು ನಾಡಿನ ಅಸ್ಮಿತೆಗೆ ಅವಮಾನಿಸಿದ್ದಾರೆ. ಸಂವಿಧಾನ ಶಿಲ್ಪಿ ಡಾ, ಬಿ.ಆರ್. ಅಂಬೇಡ್ಕರ್ ಅವರನ್ನು ಕೂಡಾ ಅವಮಾನಿಸಿದ್ದಾರೆ. ಇಂತಹವರು ಪರಿಷ್ಕರಿಸಿದ ಪಠ್ಯವನ್ನುಸರ್ಕಾರ ಮಕ್ಕಳಿಗೆ ನೀಡುವುದು ಸರಿಯಲ್ಲ. ಅಲ್ಲದೆ, ಅಕ್ಕಮಹಾದೇವಿ,ಕನಕದಾಸರು, ಪುರಂದರ ದಾಸರು, ಸಂತ ಶಿಶುನಾಳ ಶರೀಫರು ಸೇರಿದಂತೆ ಹಲವು ದಾರ್ಶನಿಒಕರ ಪಠ್ಯಗಳನ್ನು ಕೈ ಬಿಡಲಾಗಿಎದ. ಈ ಪರಿಷ್ಕೃತ ಪಠ್ಯದಲ್ಲಿ ಸಾಕಷ್ಟು ತಪ್ಪುಗಳಿವೆ ಎಂದವರು ಪತ್ರದಲ್ಲಿ ತಿಳಿಸಿದ್ದಾರೆ.
ಪಠ್ಯ ಪರಿಷ್ಕರಣೆ ವಿರುದ್ಧ ಇತ್ತೀಚೆಗೆ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿ ನನ್ನ ಮೂಲಕ ಸರ್ಕಾರಕ್ಕೆ ಮನವರಿಕೆ ಮಾಡಲು ಪ್ರತಿಭಟನಾಕರರು ನೀಡಿದ್ದ ಹಕ್ಕೋತ್ತಾಗಳನ್ನು ಈ ಪತ್ರದೊಂದಿಗೆ ಲಗತ್ತಿಸಿದ್ದೇನೆ ಎಂದು ದೇವೇಗೌಡರು ತಿಳಿಸಿದ್ದಾರೆ.