ಗುವಾಹಟಿ, ಜೂ 21 (DaijiworldNews/HR): ಅಸ್ಸಾಂನಲ್ಲಿ ಉಂಟಾಗಿರುವ ಭಾರಿ ಪ್ರವಾಹದಿಂದಾಗಿ ಮತ್ತೆ11 ಮಂದಿ ಮೃತಪಟ್ಟಿದ್ದು, ಏಳು ಮಂದಿ ನಾಪತ್ತೆಯಾಗಿದ್ದಾರೆ. ಮೃತರ ಸಂಖ್ಯೆ 82ಕ್ಕೆ ಏರಿಕೆಯಾಗಿದೆ.
ಅಸ್ಸಾಂನ 36 ಜಿಲ್ಲೆಗಳ ಪೈಕಿ 32ರಲ್ಲಿ ಕಳೆದೊಂದು ವಾರದಿಂದ ಪ್ರವಾಹ ಸ್ಥಿತಿ ಇದ್ದು, ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮುಖ್ಯಮಂತ್ರಿಗೆ ಕರೆ ಮಾಡಿ ಪರಿಸ್ಥಿತಿಯ ವಿವರವನ್ನು ಪಡೆದಿದ್ದಾರೆ.
ಇನ್ನು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದ ಪೊಲೀಸ್ ಸಿಬ್ಬಂದಿಯೊಬ್ಬರು ನೀರಿನಲ್ಲಿ ಕೊಚ್ಚಿಹೋಗಿದ್ದು, ರಾಜ್ಯದ ಒಟ್ಟು 5,424 ಗ್ರಾಮಗಳು ಪ್ರವಾಹ ಪೀಡಿತವಾಗಿವೆ. ಸಂತ್ರಸ್ತರಿಗಾಗಿ ವಿವಿಧೆಡೆ 810 ಪರಿಹಾರ ಶಿಬಿರ ಸ್ಥಾಪಿಸಿದ್ದು, ಸುಮಾರು 2.31 ಲಕ್ಷ ಜನರು ಆಶ್ರಯ ಪಡೆದಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.