ಬೆಂಗಳೂರು, ಜೂ 21 (DaijiworldNews/DB): ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಕರಾವಳಿಯ ಮೂರು ಜಿಲ್ಲೆಗಳಿಗೆ ಜೂ. 25ರವರೆಗೆ ಹವಾಮಾನ ಇಲಾಖೆ 'ಆರೆಂಜ್ ಅಲರ್ಟ್ ಘೋಷಿಸಿದೆ.
ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಸಕ್ರಿಯವಾಗಿದ್ದು, ದಕ್ಷಿಣ ಕನ್ನಡ, ಉಡುಪಿ ಮುಂತಾದೆಡೆ ಮಂಗಳವಾರ ದಿನವಿಡೀ ಮಳೆಯಾಗಿದೆ. ಜೂ.25ರವರೆಗೂ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ಭಾರೀ ಗಾಳಿ, ಮಳೆಯಾಗಲಿದೆ ಎಂದು ತಿಳಿಸಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ತುಸು ಕಡಿಮೆ ಬೀಳುವ ಸಾಧ್ಯತೆ ಇರುವುದರಿಂದ ಚಿಕ್ಕಮಗಳೂರು, ಕೋಲಾರ, ಹಾಸನ, ಚಾಮರಾಜನಗರ, ಕೊಡಗು, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ 'ಯೆಲ್ಲೋ ಅಲರ್ಟ್' ಘೋಷಿಸಲಾಗಿದೆ. ಬೆಂಗಳೂರು ನಗರದಲ್ಲೂ ಮುಂದಿನ ಎರಡು ದಿನ ಕಾಲ ಸಾಮಾನ್ಯದಿಂದ ಕೂಡಿದ ಹಗುರ ಮಳೆಯಾಗಲಿದೆ. ಉಳಿದಂತೆ ಕೆಲವು ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದ ಮಳೆ, ಮೋಡ ಮುಸುಕಿದ ವಾತಾವಾರಣ ಕಂಡು ಬರಲಿದೆ ಎಂದು ಇಲಾಖೆ ಅಧಿಕಾರಿಗಳು ತಿಳಿಸಿರುವುದಾಗಿ ವರದಿಯಾಗಿದೆ.