ನವದೆಹಲಿ, ಜೂ 21 (DaijiworldNews/DB): ರಾಹುಲ್ ಗಾಂಧಿಯವರನ್ನು ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸುತ್ತಿರುವುದನ್ನು ವಿರೋಧಿಸಿ ಕಾಂಗ್ರೆಸ್ ದೆಹಲಿಯಲ್ಲಿ ನಡೆಸುತ್ತಿರುವ ಪ್ರತಿಭಟನೆ ವೇಳೆ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪೊಲೀಸ್ ಅಧಿಕಾರಿಗಳತ್ತ ಉಗುಳಿರುವ ಘಟನೆ ನಡೆದಿದೆ.
ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದು ವಾಹನ ಹತ್ತಿಸುವ ವೇಳೆ ವಾಹನ ಏರಿದ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ನೆಟ್ಟಾ ಡಿಸೋಜಾ ಪೊಲೀಸರ ಜೊತೆ ಮಾತಿನ ಚಕಮಕಿ ನಡೆಸಿದ್ದಾರೆ. ಬಳಿಕ ಪೊಲೀಸರತ್ತ ಉಗುಳಿದ್ದಾರೆ. ಈ ವೀಡಿಯೋವನ್ನು ಬಿಜೆಪಿ ವಕ್ತಾರ ಶೆಹಜಾದ್ ಪೂನಾವಾಲಾ ಅವರು ಟ್ವಿಟರ್ನಲ್ಲಿ ಹಂಚಿಕೊಂಡಿದ್ದು, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯ ವರ್ತನೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಹುಲ್ ಗಾಂಧಿಯವರನ್ನು ವಿಚಾರಿಸಿದ್ದಕ್ಕೆ ಅಸ್ಸಾಂನಲ್ಲಿ ಪೊಲೀಸರ ಮೇಲೆ ಹಲ್ಲೆಯಾಯಿತು. ಹೈದರಾಬಾದ್ನಲ್ಲಿ ಕಾಲರ್ ಹಿಡಿದಿದ್ದಾರೆ. ಈಗ ದೆಹಲಿಯಲ್ಲಿ ಪೊಲೀಸರತ್ತ ಉಗಿಯುವ ಮೂಲಕ ಅಸಹ್ಯ ಕೆಲಸ ಮಾಡಿದ್ದಾರೆ. ಇದರ ವಿರುದ್ದ ಕಾಂಗ್ರೆಸ್ನ ಸೋನಿಯಾ, ರಾಹುಲ್, ಪ್ರಿಯಾಂಕಾ ಅವರು ಕ್ರಮ ವಹಿಸುವರೇ ಎಂವರು ಪ್ರಶ್ನಿಸಿದ್ದಾರೆ.