ನವದೆಹಲಿ, ಜೂ 22 (DaijiworldNews/MS): ಬಿಜೆಪಿ ನೇತೃತ್ವದ ಎನ್ಡಿಎ ರಾಷ್ಟ್ರಪತಿ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಅವರನ್ನು ಕಣಕ್ಕಿಳಿಸಿದ್ದು, ಈ ಕುರಿತು ಪ್ರತಿಕ್ರಿಯಿಸಿರುವ ಪ್ರಧಾನಿ ನರೇಂದ್ರ ಮೋದಿ, " ಜಾರ್ಖಂಡ್ನ ಮಾಜಿ ರಾಜ್ಯಪಾಲರು ಸಮಾಜ ಸೇವೆಗೆ ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದು, ಅವರು "ಶ್ರೇಷ್ಠ ರಾಷ್ಟ್ರಪತಿ" ಯಾಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಸಂಸದೀಯ ಮಂಡಳಿಯು ಒಡಿಶಾದ ಬುಡಕಟ್ಟು ನಾಯಕಿ ಮುರ್ಮು ಅವರನ್ನು ರಾಷ್ಟ್ರಪತಿ ಚುನಾವಣೆಗೆ ಆಡಳಿತಾರೂಢ ಎನ್ಡಿಎ ಅಭ್ಯರ್ಥಿಯನ್ನಾಗಿ ಮಂಗಳವಾರ ಹೆಸರಿಸಿದೆ.
"ದ್ರೌಪದಿ ಮುರ್ಮು ಜಿ ಅವರು ಸಮಾಜ ಸೇವೆ ಮತ್ತು ಬಡವರು, ದೀನದಲಿತರು ಮತ್ತು ಅಂಚಿನಲ್ಲಿರುವವರನ್ನು ಸಬಲೀಕರಣಗೊಳಿಸಲು ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದಾರೆ" ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.
ಅವರು ಶ್ರೀಮಂತ ಆಡಳಿತಾತ್ಮಕ ಅನುಭವವನ್ನು ಹೊಂದಿದ್ದಾರೆ ಮತ್ತು ಅತ್ಯುತ್ತಮ ಗವರ್ನಟೋರಿಯಲ್ ಅಧಿಕಾರವನ್ನು ಹೊಂದಿದ್ದರು ನಮ್ಮ ರಾಷ್ಟ್ರದ ಶ್ರೇಷ್ಠ ರಾಷ್ಟ್ರಪತಿಯಾಗುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ
ನೀತಿ ವಿಷಯಗಳ ಬಗ್ಗೆ ಅವರ ತಿಳುವಳಿಕೆ ಮತ್ತು ಸಹಾನುಭೂತಿಯ ಸ್ವಭಾವವು ನಮ್ಮ ದೇಶಕ್ಕೆ ಹೆಚ್ಚು ಪ್ರಯೋಜನವನ್ನು ನೀಡುತ್ತದೆ" ಎಂದು ಹೇಳಿದ್ದಾರೆ.