ಒಡಿಶಾ, ಜೂ 22 (DaijiworldNews/MS): ಬಿಜೆಪಿಯ ರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ದ್ರೌಪದಿ ಮುರ್ಮು ಬುಧವಾರ ತನ್ನ ತವರು ರಾಜ್ಯವಾದ ಒಡಿಶಾದ ಮಯೂರ್ಭಂಜ್ ಜಿಲ್ಲೆಯ ರಾಯರಂಗ್ಪುರದಲ್ಲಿರುವ ಶಿವ ದೇವಾಲಯಕ್ಕೆ ಆಗಮಿಸಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಈ ವೇಳೆ ದೇವಾಲಯದ ಅಂಗಣದ ನೆಲವನ್ನು ಗುಡಿಸುತ್ತಿರು ದೃಶ್ಯ ಕ್ಯಾಮಾರಾದಲ್ಲಿ ಸೆರೆಯಾಗಿದೆ.
ಒಡಿಶಾದ ಬುಡಕಟ್ಟು ನಾಯಕ, ಮುರ್ಮು ಅವರನ್ನು ಮುಂಬರುವ ರಾಷ್ಟ್ರಪತಿ ಚುನಾವಣೆಗೆ ಆಡಳಿತಾರೂಢ ಎನ್ಡಿಎ ಅಭ್ಯರ್ಥಿಯಾಗಿ ಹೆಸರಿಸಲಾಗಿತ್ತು .
ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಪಕ್ಷದ ಸಂಸದೀಯ ಮಂಡಳಿಯ ಸಭೆಯ ನಂತರ ತಮ್ಮ ಅಭ್ಯರ್ಥಿಯನ್ನು ಬಹಿರಂಗಪಡಿಸಿದ್ದರು.
ಜಾರ್ಖಂಡ್ನ ಮಾಜಿ ಗವರ್ನರ್, 64 ವರ್ಷದ ಮುರ್ಮು ಅವರು ಆಯ್ಕೆಯಾದರೆ, ಒಡಿಶಾದ ಮೊದಲ ವ್ಯಕ್ತಿ ಮತ್ತು ಭಾರತದ ರಾಷ್ಟ್ರಪತಿ ಸ್ಥಾನವನ್ನು ಅಲಂಕರಿಸಿದ ಮೊದಲ ಬುಡಕಟ್ಟು ಮಹಿಳೆ ಎಂಬ ಖ್ಯಾತಿ ಅವರದಾಗುತ್ತದೆ
ಜುಲೈ 18 ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದ್ದು, ಜುಲೈ 21 ರಂದು ಮತ ಎಣಿಕೆ ನಡೆಯಲಿದೆ.