ನವದೆಹಲಿ, ಜೂ 22 (DaijiworldNews/DB): ದೆಹಲಿಗೆ ತೆರಳಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರನ್ನು ದೆಹಲಿ ಸಂಚಾರಿ ಪೊಲೀಸರು ತಡೆದ ಘಟನೆ ಬುಧವಾರ ನಡೆದಿದೆ.
ರಾಹುಲ್ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯವು ವಿಚಾರಣೆ ನಡೆಸುತ್ತಿರುವುದನ್ನು ಖಂಡಿಸಿ ಕಾಂಗ್ರೆಸ್ ಹಮ್ಮಿಕೊಳ್ಳಲಿರುವ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಲಿ ದೆಹಲಿಗೆ ತೆರಳಿದ್ದ ಸಿದ್ದರಾಮಯ್ಯ ಅವರು ಬೆಳಗ್ಗೆ ಎಐಸಿಸಿ ಕಚೇರಿಗೆ ಹೊರಟಿದ್ದರು. ಈ ವೇಳೆ ದೆಹಲಿ ಸಂಚಾರಿ ಪೊಲೀಸರು ಅವರ ಕಾರನ್ನು ತಡೆದರು. ಬಳಿಕ ಕಾರ್ಯಕರ್ತರು ಸಿದ್ದರಾಮಯ್ಯ ಅವರ ಬಗ್ಗೆ ವಿವರಣೆ ನೀಡಿದ ನಂತರ ಮುಂದೆ ಸಾಗಲು ಪೊಲೀಸರು ಅನುಮತಿ ನೀಡಿದರು.
ಪ್ರತಿಭಟನೆ ಸಲುವಾಗಿ ಎಐಸಿಸಿ ಕಚೇರಿಯಲ್ಲಿ ಸಮಾಲೋಚನಾ ಸಭೆ ನಡೆಯಲಿದ್ದು, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ನಾಯಕರು ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಎಐಸಿಸಿ ಕಚೇರಿಗೆ ತೆರಳುತ್ತಿದ್ದರು.