ನವದೆಹಲಿ, ಜೂ 22 (DaijiworldNews/MS): ಕೋವಿಡ್ ಮತ್ತು ಶ್ವಾಸಕೋಶದ ಸೋಂಕಿನಿಂದ ಸಂಪೂರ್ಣವಾಗಿ ಚೇತರಿಸಿಕೊಳ್ಳುವವರೆಗೆ ತಮ್ಮ ಹಾಜರಾತಿಯನ್ನು ಕೆಲವು ವಾರಗಳವರೆಗೆ ಮುಂದೂಡುವಂತೆ ಕೋರಿ ಜಾರಿ ನಿರ್ದೇಶನಾಲಯಕ್ಕೆ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಬುಧವಾರ ಪತ್ರ ಬರೆದಿದ್ದಾರೆ.
ಈ ವಿಚಾರವನ್ನು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ.
ಕೋವಿಡ್ ಮತ್ತು ಶ್ವಾಸಕೋಶದ ಸೋಂಕಿನಿಂದಾಗಿ ಆಸ್ಪತ್ರೆಗೆ ದಾಖಲಾದ ನಂತರ ಅವರು ಮನೆಯಲ್ಲಿ ವಿಶ್ರಾಂತಿ ಪಡೆಯಲು ಕಟ್ಟುನಿಟ್ಟಾಗಿ ಸೂಚಿಸಿರುವುದರಿಂದ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮನವಿ ಮಾಡಿದ್ದಾರೆ
ಸೋನಿಯಾ ಗಾಂಧಿ ಅವರು ಇಡಿಗೆ ಪತ್ರ ಬರೆದಿದ್ದು, ಅವರು ಸಂಪೂರ್ಣವಾಗಿ ಚೇತರಿಸಿಕೊಳ್ಳುವವರೆಗೆ ಅಲ್ಲಿ ಹಾಜರಾಗುವುದನ್ನು ಕೆಲವು ವಾರಗಳವರೆಗೆ ಮುಂದೂಡುವಂತೆ ಕೋರಿದ್ದಾರೆ' ಎಂದು ಜೈರಾಮ್ ರಮೇಶ್ ಟ್ವೀಟ್ ಮಾಡಿದ್ದಾರೆ.