ಮಹಾರಾಷ್ಟ್ರ, ಜೂ 22 (DaijiworldNews/MS): ಮಹಾರಾಷ್ಟದ ಶಿವಸೇನೆಯ ಶಾಸಕರು ಮಹಾ ವಿಕಾಸ್ ಅಘಾಡಿ ಸರ್ಕಾರದ ವಿರುದ್ಧ ಬಂಡೆದ್ದು, ರಾಜಕೀಯ ಸಂಚಲನ ಸೃಷ್ಟಿಸಿರುವ ಬೆನ್ನಲ್ಲೇ ಅದೇ ಪಕ್ಷದ ಶಾಸಕರೊಬ್ಬರು ಮತ್ತೊಂದು ತಿರುವು ಕೊಟ್ಟಿದ್ದಾರೆ.
ಮಹಾರಾಷ್ಟ್ರದ ರಾಜಕೀಯ ಬಿರುಗಾಳಿಯ ಮಧ್ಯೆ ತಮ್ಮನ್ನು 'ಅಪಹರಣ' ಮಾಡಿ ಗುಜರಾತ್ನ ಸೂರತ್ಗೆ ಕರೆದೊಯ್ಯಲಾಗಿತ್ತು ಎಂದು ಶಿವಸೇನೆ ಶಾಸಕ ನಿತಿನ್ ದೇಶ್ಮುಖ್ ಬಹಿರಂಗಪಡಿಸಿದ್ದಾರೆ. ಶಿವಸೇನೆಯ ಬಂಡಾಯ ನಾಯಕ ಏಕನಾಥ್ ಶಿಂಧೆ ಅವರೊಂದಿಗೆ ನಿತಿನ್ ದೇಶ್ಮುಖ್ ದನಿಗೂಡಿಸಿರುವುದಾಗಿ ತಿಳಿಯಲಾಗಿತ್ತು.
ನಾನು ತಪ್ಪಿಸಿಕೊಂಡು ಬೆಳಗಿನ ಜಾವ 3 ಗಂಟೆ ಸುಮಾರಿಗೆ ರಸ್ತೆಯಲ್ಲಿ ನಿಂತಿದ್ದಾಗ ಸುಮಾರು 100ರಿಂದ 150 ಪೊಲೀಸರು ಬಂದು ನನ್ನನ್ನು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದರು. ಅವರು ನನಗೆ ಹೃದಯಾಘಾತವಾಗಿದೆ ಎಂದು ಬಿಂಬಿಸಲಾಯಿತು. ನನಗೆ ಬಲವಂತವಾಗಿ ಕೆಲವು ಚುಚ್ಚುಮದ್ದುಗಳನ್ನು ನೀಡಲಾಯಿತು ಎಂದು ಅವರು ದೂರಿದ್ದಾರೆ
ನಿತಿನ್ ದೇಶ್ಮುಖ್ ಅವರ ಪತ್ನಿ ನಿನ್ನೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ನಿತಿನ್ ಅವರು ನಾಪತ್ತೆಯಾಗಿರುವುದಾಗಿ ದೂರು ಸಲ್ಲಿಸಿದ್ದರು. ಅವರಿಗೆ ಪ್ರಾಣಾಪಾಯ ಇರುವ ಶಂಕೆ ವ್ಯಕ್ತಪಡಿಸಿದ್ದರು.