ಮುಂಬೈ, ಜೂ 23 (DaijiworldNews/HR): ಮಹಾರಾಷ್ಟ್ರ ಸರ್ಕಾರದ ವಿರುದ್ಧ ಬಂಡಾಯ ಸಾರಿರುವ ಏಕನಾಥ ಶಿಂಧೆ ಅವರ ಬಣಕ್ಕೆ ಶಿವಸೇನಾದ ಮತ್ತೆ ನಾಲ್ವರು ಶಾಸಕರು ಸೇರ್ಪಡೆಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಅಸ್ಸಾಂನ ಗುವಾಹಟಿಯಲ್ಲಿರುವ 'ರಾಡಿಸನ್ ಬ್ಲೂ' ಪಂಚತಾರಾ ಹೋಟೆಲ್ನಲ್ಲಿ ಏಕನಾಥ ಶಿಂಧೆ ಅವರು ಶಾಸಕರನ್ನು ಇಂದು ಬರಮಾಡಿಕೊಂಡಿದ್ದು, ಶಿವಸೇನಾದ ಮತ್ತಿಬ್ಬರು ಶಾಸಕರು ಬುಧವಾರ ತಡರಾತ್ರಿ ಗುಜರಾತಿನ ಸೂರತ್ಗೆ ತೆರಳಿ ಶಿಂಧೆ ಬಣಕ್ಕೆ ಸೇರಿಕೊಂಡಿದ್ದಾರೆ ಎನ್ನಲಾಗಿದೆ.
ಇನ್ನು ಶಿಂಧೆ ನೇತೃತ್ವದ ಶಾಸಕರ ಗುಂಪು ಬಂಡಾಯ ಸಾರಿದ ಬೆನ್ನಲ್ಲೇ ಪಕ್ಷದ ಶಾಸಕರು ಬಯಸಿದರೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಉದ್ಧವ್ ಠಾಕ್ರೆ ಹೇಳಿದ್ದಾರೆ.
ಠಾಕ್ರೆ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಶಿಂಧೆ, 'ಶಿವಸೇನಾ ಉಳಿಯ ಬೇಕು ಎಂದಿದ್ದರೆ, ಎನ್ಸಿಪಿ ಮತ್ತು ಕಾಂಗ್ರೆಸ್ ಜತೆಗಿನ ಅಸಹಜ ಮೈತ್ರಿಯನ್ನು ತೊರೆಯಿರಿ ಎಂದು ಹೇಳಿರುವುದಾಗಿ ವರದಿಯಾಗಿದೆ.