ಲಕ್ನೋ, ಜೂ 23 (DaijiworldNews/HR): ಉತ್ತರ ಪ್ರದೇಶದ ಫಿಲಿಭಿಟ್ ನ ರಾಷ್ಟ್ರೀಯ ಹೆದ್ದಾರಿಯಲ್ಲಿ ತೀರ್ಥಯಾತ್ರಯಿಂದ ಹಿಂದೆ ಬರುತ್ತಿದ್ದ ಭಕ್ತರಿದ್ದ ಟ್ರಕ್ಕೊಂದು ಮರಕ್ಕೆ ಗುದ್ದಿದ ಪರಿಣಾಮ ಹತ್ತು ಮಂದಿ ಮೃತಪಟ್ಟು, ಏಳು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.
ಮುಂಜಾನೆ ಸುಮಾರು 4.30ರ ಸುಮಾರಿಗೆ ಈ ಘಟನೆ ನಡೆದಿದ್ದು, ಟ್ರಕ್ ಮರಕ್ಕೆ ಗುದ್ದಿದ ಪರಿಣಾಮ ಹತ್ತು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಾಯಗೊಂಡ ಐವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಬರೇಲಿ ಆಸ್ಪತ್ರೆಗೆ ಸೇರಿಸಲಾಗಿದೆ.
ಇನ್ನು ಭಕ್ತರು ಟ್ರಕ್ ನಲ್ಲಿ ಹರಿದ್ವಾರದಿಂದ ಲಖೀಂಪುರಕ್ಕೆ ಹಿಂತಿರುಗುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.