ತುಮಕೂರು, ಜೂ 23 (DaijiworldNews/HR): ಜೆಡಿಎಸ್ನಿಂದ ನನ್ನನ್ನು ಉಚ್ಛಾಟನೆ ಮಾಡಿರುವುದು ನನಗೆ ಸಂತೋಷವಾಗಿದೆ. ಡಿಸೆಂಬರ್ನಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದು ಉಚ್ಛಾಟಿತ ಜೆಡಿಎಸ್ ಶಾಸಕ ಎಸ್.ಆರ್.ಶ್ರೀನಿವಾಸ್ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ನಿಂದ ನನ್ನನ್ನು ಉಚ್ಛಾಟನೆ ಮಾಡಿರುವುದು ಮುಜುಗರ ಅಥವಾ ಅವಮಾನ ಎಂದು ನನಗೆ ಅನಿಸೋದಿಲ್ಲ. ಅವರು ನನ್ನ ವಿರುದ್ಧ ಅಭ್ಯರ್ಥಿಯನ್ನು ತಯಾರು ಮಾಡಿದಾಗಲೇ ನಾನು ಉಚ್ಛಾಟಿತನಾಗಿದ್ದೆ. ಡಿಸೆಂಬರ್ನಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದಿದ್ದಾರೆ.
ಇನ್ನು ರಾಜ್ಯಸಭೆ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘಿಸಿ ಅಡ್ಡ ಮತದಾನ ಮಾಡಿದ ಕೋಲಾರ ಶಾಸಕ ಕೆ.ಶ್ರೀನಿವಾಸ ಗೌಡ ಹಾಗೂ ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಅವರನ್ನು ಜೆಡಿಎಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟನೆ ಮಾಡಲಾಗಿದೆ.