ಬೆಂಗಳೂರು, ಜೂ 23 (DaijiworldNews/MS): ಆದಾಯ ತೆರಿಗೆಯಲ್ಲಿ ವಂಚನೆ ಹಿನ್ನೆಲೆಯಲ್ಲಿ ಖಾಸಗಿ ಶಿಕ್ಷಣ ಸಂಸ್ಥೆ, ರಿಯಲ್ ಎಸ್ಟೇಟ್, ಬಿಲ್ಡರ್ ಗಳ ಮನೆ ಮೇಲೆ ಆದಾಯ ಇಲಾಖೆ ಅಧಿಕಾರಿಗಳು ಗುರುವಾರ ಬೆಳಗ್ಗೆ ದಾಳಿ ನಡೆಸಿದ್ದಾರೆ.
ನಗರದ ಮೂರು ಖಾಸಗಿ ಶಿಕ್ಷಣ ಸಂಸ್ಥೆಗಳಾದ ರೇವಾ ಶಿಕ್ಷಣ ಸಂಸ್ಥೆ, ದಿವ್ಯಾ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್, ಕೃಷ್ಣದೇವರಾಯ ಇನ್ಸ್ಟಿಟ್ಯೂಷನ್ ಮೇಲೆ ಐಟಿ ದಾಳಿ ನಡೆಸಲಾಗಿದೆ.
ಸರ್ಕಾರದ ನಿಯಮಾವಳಿಗಳನ್ನು ಮೀರಿ ಅಕ್ರಮ ಶುಲ್ಕ ಸಂಗ್ರಹ ಆರೋಪ, ಹಾಗೂ ಪೇಮೆಂಟ್ ಸೀಟ್ ಬ್ಲಾಕ್ ಮಾಡಿ ನಿಗದಿಗಿಂತ ಹೆಚ್ಚಿನ ಶುಲ್ಕ್ಷ ಸಂಗ್ರಹಿಸಲಾದ ಹಣದ ಮಾಹಿತಿ ಐಟಿ ಗೆ ಒದಗಿಸದೆ ತೆರಿಗೆ ವಂಚನೆ ನಡೆಸುತ್ತಿದ್ದ ಹಿನ್ನಲೆಯಲ್ಲಿ ದಾಳಿ ನಡೆಸಲಾಗಿದೆ.
ಇದರೊಂದಿಗೆ ರಿಯಲ್ ಎಸ್ಟೇಟ್, ಬಿಲ್ಡರ್ ಗಳ ಮನೆ ಮೇಲೂ ದಾಳಿ ಮಾಡಲಾಗಿ ಸುಮಾರೂ 20 ಕ್ಕೂ ಹೆಚ್ಚು ಕಡೆ 250 ಕ್ಕೂ ಹೆಚ್ಚು ಅಧಿಕಾರಿಗಳಿಂದ ದಾಳಿ ಮಾಡಲಾಗಿದೆ