ನವದೆಹಲಿ, ಜೂ 23 (DaijiworldNews/DB): ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರೀವಾಲ್ ಅವರ ಕಚೇರಿಯ ಮೂವರು ಅಧಿಕಾರಿಗಳನ್ನು ಅಮಾನತು ಮಾಡಿ ಆದೇಶಿಸಲಾಗಿದೆ.
ಸಿಎಂ ಕಚೇರಿಯ ಉಪ ಕಾರ್ಯದರ್ಶಿ ಹಾಗೂ ಇಬ್ಬರು ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ ಗಳನ್ನು ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಅವರು ಅಮಾನತು ಮಾಡಿದ್ದಾರೆ. ವಸಂತ ವಿಹಾರ್ ಎಸ್ ಡಿಎಂ ಹರ್ಷಿತ್ ಜೈನ್ ಮತ್ತು ವಿವೇಕ್ ವಿಹಾರ್ ಎಸ್ ಡಿಎಂ ದೇವೇಂದ್ರ ಶರ್ಮಾ ಅಮಾನತಾದ ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ಗಳು.
ಮುಖ್ಯಮಂತ್ರಿ ಕಚೇರಿಯಲ್ಲಿ ನೂತನ ಉಪ ಕಾರ್ಯದರ್ಶಿಯಾಗಿ ಪ್ರಕಾಶ್ ಚಂದ್ರ ಠಾಕೂರ್ ಅವರನ್ನು ನಿಯೋಜಿಸಲಾಗಿದೆ. ಅಮಾನತುಗೊಂಡ ಅಧಿಕಾರಿಗಳ ವಿರುದ್ದ ಶಿಸ್ತು ಕ್ರಮ ಕೈಗೊಳ್ಳುವುದಾಗಿ ವಿನಯ್ ಕುಮಾರ್ ಸಕ್ಸೇನಾ ಹೇಳಿದ್ದಾರೆ.