ದಿಸ್ಪುರ, ಜೂ 23 (DaijiworldNews/HR): ಅಸ್ಸಾಂನಲ್ಲಿ ಉಂಟಾಗಿರುವ ಭಾರಿ ಪ್ರವಾಹದಿಂದಾಗಿ ಮತ್ತೆ12 ಮಂದಿ ಮೃತಪಟ್ಟಿದ್ದು, ಪ್ರವಾಹ ಮತ್ತು ಭೂಕುಸಿತಕ್ಕೆ ಬಲಿಯಾದವರ ಸಂಖ್ಯೆ 100ಕ್ಕೆ ಏರಿಕೆಯಾಗಿದೆ.
ಪ್ರವಾಹ ಪೀಡಿತ ಜಿಲ್ಲೆಯಲ್ಲಿ 2.71 ಲಕ್ಷಕ್ಕೂ ಹೆಚ್ಚು ಜನರು ಆಶ್ರಯ ಪಡೆದಿದ್ದು, ಒಟ್ಟು 845ಪರಿಹಾರ ಶಿಬಿರಗಳು ಮತ್ತು 1,025 ಪರಿಹಾರ ವಿತರಣಾ ಕೇಂದ್ರಗಳನ್ನು ಜಿಲ್ಲಾಡಳಿತ ಸ್ಥಾಪಿಸಲಾಗಿದೆ.
ಇನ್ನು ಬಜಾಲಿ, ಬಕ್ಸಾ, ಬರ್ಪೇಟಾ, ಬಿಸ್ವನಾಥ್, ಕ್ಯಾಚಾರ್, ಚಿರಾಂಗ್ ಸೇರಿದಂತೆ ಅನೇಕ ಜಿಲ್ಲೆಗಳು ಪ್ರವಾಹದ ಹೊಡೆತಕ್ಕೆ ಸಿಲುಕಿದ್ದು, ಮುಖ್ಯಮಂತ್ರಿ ಹಿಮಾಂತ ಬಿಸ್ವಾ ಶರ್ಮಾ ಪ್ರವಾಹಪೀಡಿತ ಪ್ರದೇಶಗಳಲ್ಲಿ ಇಂದು ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ.