ನವದೆಹಲಿ, ಜೂ 23 (DaijiworldNews/HR): ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಜಾರಿ ನಿರ್ದೇಶನಾಲಯ(ಇಡಿ) ಹೊಸ ಸಮನ್ಸ್ ಜಾರಿ ಮಾಡಿದ್ದು, ಜುಲೈನಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.
ಸೋನಿಯಾ ಗಾಂಧಿ ಅವರು ಇತ್ತೀಚಿಗಷ್ಟೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಅನಾರೋಗ್ಯದ ಬಗ್ಗೆ ಇಡಿಗೆ ಪತ್ರ ಬರೆದಿದ್ದರು ಮತ್ತು ವಿಚಾರಣೆಯನ್ನು ಮುಂದೂಡುವಂತೆ ಮನವಿ ಮಾಡಿದ್ದರು.
ಇನ್ನು ಕೊರೊನಾ ನಂತರದ ಸಮಸ್ಯೆಗಳಿಂದ ಆಸ್ಪತ್ರೆಗೆ ದಾಖಲಾಗಿದ್ದ ಸೋನಿಯಾ ಗಾಂಧಿ ಒಂದು ವಾರದ ನಂತರ ಸೋಮವಾರ ದೆಹಲಿಯ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಇದೀಗ ಜುಲೈನಲ್ಲಿ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ(ಇಡಿ) ಇಂದು ಹೊಸ ಸಮನ್ಸ್ ಜಾರಿ ಮಾಡಿದೆ.