ಮೀರತ್ (ಹರಿಯಾಣ), ಜೂ 23 (DaijiworldNews/DB): ಹರಿಯಾಣದ ಮೀರತ್-ಝಜ್ಜರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಮಧ್ಯೆ ಅಡ್ಡಲಾಗಿ ಹಾಕಲಾಗಿದ್ದ ಬ್ಯಾರಿಕೇಡ್ಗೆ ಕಾರು ಗುದ್ದಿದ ಪರಿಣಾಮ ಕಾರಿಗೆ ಬೆಂಕಿ ಹತ್ತಿಕೊಂಡು ಮೂವರು ಎಂಬಿಬಿಎಸ್ ವಿದ್ಯಾರ್ಥಿಗಳು ಸಜೀವದಹನವಾಗಿರುವ ಘಟನೆ ನಡೆದಿದೆ.
ರೋಹ್ಟಕ್ನ ಪಿಜಿಐನಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದ ಆರು ಮಂದಿ ವಿದ್ಯಾರ್ಥಿಗಳು ರೋಹ್ಟಕ್ನಿಂದ ಹರಿದ್ವಾರಕ್ಕೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ರಾಷ್ಟ್ರೀಯ ಹೆದ್ದಾರಿ-44ರ ಮೇಲ್ಸೇತುವೆಯ ಕಾಮಗಾರಿ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ರಸ್ತೆ ಮಧ್ಯೆ ಅಡ್ಡಲಾಗಿ ಬ್ಯಾರಿಕೇಡ್ಗಳನ್ನು ಹಾಕಲಾಗಿತ್ತು. ಆದರೆ ಕತ್ತಲಲ್ಲಿ ಬ್ಯಾರಿಕೇಡ್ ಕಾಣದೆ ಕಾರು ಬ್ಯಾರಿಕೇಡ್ಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಕಾರಿಗೆ ಬೆಂಕಿ ಹೊತ್ತಿಕೊಂಡು ಕಾರಿನಲ್ಲಿದ್ದ ಮೂವರು ಸಜೀವದಹನವಾಗಿದ್ದಾರೆ. ಇನ್ನೂ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.
ಚಾಲಕ ಅತಿ ವೇಗದಿಂದ ಕಾರು ಚಲಾಯಿಸುತ್ತಿದ್ದಿದ್ದರಿಂದ ಬ್ಯಾರಿಕೇಡ್ ಕಾಣದೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಮುನ್ಸೂಚನೆ ಇಲ್ಲದೆ ಬ್ಯಾರಿಕೇಡ್ ಅಳವಡಿಸಿದ ಅಧಿಕಾರಿಗಳು ಮತ್ತು ಗುತ್ತಿಗೆ ಕಂಪೆನಿಯ ವಿರುದ್ದ ಸಾರ್ವಜನಿಕ ವಲಯದಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಘಟನೆ ನಡೆದ ಕೂಡಲೇ ಸ್ಥಳೀಯ ಪೊಲೀಸರು ಸ್ಥಳಕ್ಕಾಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ.