ರಾಮನಗರ, ಜೂ 24 (DaijiworldNews/HR): ಈ ವರ್ಷದಿಂದಲೇ ನಾಡಪ್ರಭು ಕೆಂಪೇಗೌಡರ ಹೆಸರಿನಲ್ಲಿ ಅಂತಾರಾಷ್ಟ್ರೀಯ ಪ್ರಶಸ್ತಿ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಘೋಷಣೆ ಮಾಡಿದ್ದಾರೆ.
ಈ ಕುರಿತು ಮಾತನಾಡಿದ ಅವರು, ನಾಡಪ್ರಭು ಕೆಂಪೇಗೌಡರ ಗೌರವಾರ್ಥ ಈ ವರ್ಷದಿಂದ ಮೂವರು ಸಾಧಕರಿಗೆ ತಲಾ 5 ಲಕ್ಷ ರೂ. ನಗದು ಸಹಿತವಾದ ಅಂತಾರಾಷ್ಟ್ರೀಯ ಪ್ರಶಸ್ತಿ ನೀಡಲಾಗುವುದು ಎಂದರು.
ಇನ್ನು ಕೆಂಪೇಗೌಡರು ಕಟ್ಟಿಸಿರುವ ಐತಿಹಾಸಿಕ ಕೋಟೆಯನ್ನು ಸಂಪೂರ್ಣವಾಗಿ ಜೀರ್ಣೋದ್ಧಾರ ಮಾಡಿ, ಸಂರಕ್ಷಿಸಲಾಗುವುದು, ಕೆಂಪೇಗೌಡರಿಗೆ ಸೂಕ್ತ ಗೌರವ ನೀಡುವ ಉದ್ದೇಶದಿಂದ ಬೆಂಗಳೂರು ವಿಮಾನ ನಿಲ್ದಾಣದಲ್ಲಿ 108 ಅಡಿ ಎತ್ತರದ ಬೃಹತ್ ಪ್ರತಿಮೆ ಸ್ಥಾಪಿಸಲಾಗುತ್ತಿದೆ ಎಂದಿದ್ದಾರೆ.