ನವದೆಹಲಿ, ಜೂ 24 (DaijiworldNews/HR): ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ನ್ಯಾಷನಲ್ ಡೆಮಾಕ್ರಟಿಕ್ ಅಲೈಯನ್ಸ್ ಅಧ್ಯಕ್ಷೀಯ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ.
ದ್ರೌಪದಿ ಮುರ್ಮು ಅವರು ವಿರೋಧ ಪಕ್ಷದ ಅಭ್ಯರ್ಥಿ ಯಶವಂತ್ ಸಿನ್ಹಾ ವಿರುದ್ಧ ಸ್ಪರ್ಧಿಸುತ್ತಿದ್ದಾರೆ.
ಇನ್ನು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ದೆಹಲಿಯಲ್ಲಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿದ್ದು, ಅವರ ಅಧ್ಯಕ್ಷೀಯ ನಾಮನಿರ್ದೇಶನವನ್ನು ಭಾರತದಾದ್ಯಂತ ಸಮಾಜದ ಎಲ್ಲಾ ವರ್ಗಗಳು ಶ್ಲಾಘಿಸಿವೆ ಎಂದಿದ್ದಾರೆ.
16ನೇ ರಾಷ್ಟ್ರಪತಿ ಚುನಾವಣೆ ಜುಲೈ 18ರಂದು ನಡೆಯಲಿದ್ದು, ಜುಲೈ 21ರಂದು ಮತ ಎಣಿಕೆ ನಡೆಯಲಿದೆ.