ಬಳ್ಳಾರಿ, ಜೂ 25 (DaijiworldNews/HR): ಮಹಾರಾಷ್ಟ್ರ ಸರ್ಕಾರದ ಬಿಕ್ಕಿಟ್ಟಿನಲ್ಲಿ ಬಿಜೆಪಿಯ ಪಾತ್ರ ಇಲ್ಲ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರ ಸರ್ಕಾರದ ಬಿಕ್ಕಟ್ಟಿನಲ್ಲಿ ಬಿಜೆಪಿ ಪಾತ್ರ ಇಲ್ಲ. ಉದ್ದವ್ ಠಾಕ್ರೆ ರಾಜೀನಾಮೆ ನೀಡುತ್ತಾರೆ ಎನ್ನುವುದನ್ನು ಕೇಳಿದ್ದೇನೆ. ಅಲ್ಲಿನ ಶಾಸಕರೇ ಆ ಸರ್ಕಾರದಲ್ಲಿ ಇರಲ್ಲ ಅಂದು ಹೇಳುತ್ತಿದ್ದಾರೆ. ಹೀಗಾಗಿ ಮಹಾರಾಷ್ಟ್ರದ ಅಘಾಡಿ ಸರ್ಕಾರ ಉಳಿಯುವ ಮಾತೇ ಇಲ್ಲ ಎಂದರು.
ಇನ್ನು ಮಹಾರಾಷ್ಟ್ರದಲ್ಲಿ ಬಂಡಾಯ ಶಾಸಕರ ಕಚೇರಿಗಳ ಮೇಲೆ ಶಿವಸೇನೆ ಪಕ್ಷದ ಕಾರ್ಯಕರ್ತರು ದಾಳಿ ಮಾಡಿದ್ದಾರೆ. ಪುಣೆಯಲ್ಲಿರುವ ಶಾಸಕ ತನಾಜಿ ಸಾವಂತ್ ಅವರ ಕಚೇರಿಯನ್ನೂ ಧ್ವಂಸ ಮಾಡಲಾಗಿದೆ.