ಚೆನ್ನೈ, ಜೂ 25 (DaijiworldNews/HR): ಕಾರಿನ ಮೇಲೆ ಮರ ಬಿದ್ದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಚೆನ್ನೈನ ಕೆ.ಕೆ.ನಗರದಲ್ಲಿ ನಡೆದಿದೆ.
ಮಹಿಳೆಯೊಬ್ಬರು ತನ್ನ ಕಚೇರಿಯಿಂದ ಹಿಂದಿರುಗುತ್ತಿದ್ದಾಗ ಮರ ಅವರ ಕಾರಿನ ಮೇಲೆ ಏಕಾಏಕಿ ಬಿದ್ದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡು ಆಸ್ಪತ್ರೆಗೆ ಚಿಕಿತ್ಸೆ ಪಡೇಯುತ್ತಿದ್ದಾರೆ.
ಇನ್ನು ಈ ಬಗ್ಗೆ ಚೆನ್ನೈ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಚೆನ್ನೈ ನಗರದ ಕೆಲವು ಪ್ರದೇಶಗಳಲ್ಲಿ ಈ ಬಾರಿ ದಾಖಲೆಯ ಮಳೆಯಾಗಿದೆ.