ಅಹಮದಾಬಾದ್, ಜೂ 25 (DaijiworldNews/HR): ಮಕ್ಕಳ ಆಸ್ಪತ್ರೆಯನ್ನು ಹೊಂದಿರುವ ಬಹುಮಹಡಿ ವಾಣಿಜ್ಯ ಸಂಕೀರ್ಣವೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಮಕ್ಕಳೂ ಸೇರಿದಂತೆ ಒಟ್ಟು 70 ಮಂದಿಯನ್ನು ರಕ್ಷಿಸಿರುವ ಘಟನೆ ಅಹಮದಾಬಾದ್ನಲ್ಲಿ ನಡೆದಿದೆ.
ವಾಣಿಜ್ಯ ಸಂಕೀರ್ಣದಲ್ಲಿ ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿದ್ದು, ಆಸ್ಪತ್ರೆಯಲ್ಲಿದ್ದ ಮಕ್ಕಳೂ ಸೇರಿದಂತೆ ಒಟ್ಟು 70 ಮಂದಿಯನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇನ್ನು ನವಜಾತ ಶಿಶು ತೀವ್ರ ನಿಗಾ ಘಟಕದಲ್ಲಿ ದಾಖಲಾಗಿದ್ದ ಮೂರು ಶಿಶುಗಳು, ಹತ್ತು ಮಕ್ಕಳು ಸೇರಿದಂತೆ, ಒಟ್ಟು 70 ಜನರನ್ನು ರಕ್ಷಿಸಿ, ಸ್ಥಳಾಂತರಿಸಲಾಗಿದ್ದು, ರೋಗಿಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ.