ಅಹಮದಾಬಾದ್, ಜೂ 26 (DaijiworldNews/HR): ಸ್ವಯಂ ಸೇವಾ ಸಂಸ್ಥೆಯೊಂದರ ಮೇಲಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್ ಭಯೋತ್ಪಾದನಾ ನಿಗ್ರಹ ದಳದಿಂದ ಬಂಧಿತರಾಗಿರುವ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಡ್ ಅವರನ್ನು ಇಂದು ಅಹಮದಾಬಾದ್ ಕ್ರೈಮ್ ಬ್ರಾಂಚ್ ಪೊಲೀಸರ ವಶಕ್ಕೆ ಹಸ್ತಾಂತರಿಸಲಾಗಿದೆ ಎಂದು ತಿಳಿದು ಬಂದಿದೆ.
ತೀಸ್ತಾ ಸೆಟಲ್ವಡ್ ಅವರ ವಿರುದ್ಧ ಹೊಸದಾಗಿ ದಾಖಲಾಗಿರುವ ವಂಚನೆ, ಕ್ರಿಮಿನಲ್ ಪಿತೂರಿ ಕೇಸ್ ಗೆ ಸಂಬಂಧಿಸಿದಂತೆ ಅಹಮದಾಬಾದ್ ಅಪರಾಧ ವಿಭಾಗದ ಪೊಲೀಸರ ವಶಕ್ಕೆ ನೀಡಲಾಗಿದೆ.
ಅಪರಾಧ ವಿಭಾಗದ ಸಬ್ ಇನ್ಸ್ ಪೆಕ್ಟರ್ ಡಿ. ಬಿ. ಬರಾದ್ ದಾಖಲಿಸಿದ ದೂರಿನ ಆಧಾರದ ಮೇಲೆ ಅಹಮದಾಬಾದ್ ಅಪರಾಧ ವಿಭಾಗದಲ್ಲಿ ಆಕೆಯ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ.