ಚಿತ್ರದುರ್ಗ, ಜೂ 26 (DaijiworldNews/HR): ಚಿತ್ರದುರ್ಗ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ನಾಲ್ವರು ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದು, ಈ ಕುರಿತು ಪ್ರಕರಣ ದಾಖಲಾಗಿರುವ ಘಟನೆ ನಡೆದಿದೆ.
ಬಾಲಕಿಯನ್ನು ವರ್ಷದ ಹಿಂದೆ ಬೆದರಿಸಿ ಬಲವಂತವಾಗಿ ಮದುವೆಯಾಗಿದ್ದ ಯುವಕ ಹಾಗೂ ಮೂವರು ಸ್ನೇಹಿತರು ನಗರದ ಹೊರವಲಯಕ್ಕೆ ಬಾಲಕಿಯನ್ನು ಕರೆದೊಯ್ದು ಸಾಮೂಹಿಕವಾಗಿ ಅತ್ಯಾಚಾರವೆಸಗಿದ್ದರು.
ಇನ್ನು ಈ ಕೃತ್ಯದ ಬಗ್ಗೆ ದೂರು ನೀಡದಂತೆ ಬಾಲಕಿಗೆ ಕೊಲೆ ಬೆದರಿಕೆ ಹಾಕಿ, ಪ್ರಕರಣವನ್ನು ಮುಚ್ಚಿ ಹಾಕುವ ಹುನ್ನಾರ ನಡೆದಿತ್ತು ಎಂದು ದೂರಿನಲ್ಲಿ ಹೇಳಲಾಗಿದೆ.
ಈ ಕುರಿತು ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಾಲ್ಯ ವಿವಾಹ ನಿಷೇಧ ಕಾಯ್ದೆ ಹಾಗೂ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ಪ್ರಕರಣ ದಾಖಲಾಗಿದೆ.