ಹಾಸನ, ಜೂ 26 (DaijiworldNews/HR): ಹಾಸನ ಜಿಲ್ಲೆಯ ಅರಸಿಕೆರೆಯ ಯುವಕನೊಬ್ಬ ತಾನು ಪ್ರೀತಿಸಿದ ಹುಡುಗಿ ಮೋಸ ಮಾಡಿದ್ದಕ್ಕೆ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡಿರುವ ಯುವಕನನ್ನು ದಿಲೀಪ್ ಎಂದು ಗುರುತಿಸಲಾಗಿದೆ.
ಕೆಲ ವರ್ಷಗಳಿಂದ ದಿಲೀಪ್ ಮತ್ತು ಕುಟುಂಬಸ್ಥರು ಬೆಂಗಳೂರಿನಲ್ಲಿ ನೆಲೆಸಿದ್ದು ಎಲ್ಲರೂ ಗಾರ್ಮೆಂಟ್ಸ್ನಲ್ಲಿ ಕೆಲಸ ಮಾಡುತ್ತಿದ್ದು, ಅದೇ ಗಾರ್ಮೆಂರ್ಟ್ಸ್ನಲ್ಲಿ ಕೆಲಸ ಮಾಡುತ್ತಿದ್ದ ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಬೆಟ್ಟದಕೂರ್ಲಿ ಗ್ರಾಮದ ಯುವತಿಯೊಬ್ಬಳನ್ನು ದಿಲೀಪ್ ಪ್ರೀತಿಸುತ್ತಿದ್ದರು.
ಇನ್ನು ಯುವತಿಯು ಮನೆಯ ಕಾರಣ ನೀಡಿ ಪ್ರೀತಿ ಮಾಡುವುದಿಲ್ಲ ಎಂದಿದ್ದಾಳೆ. ಇದರಿಂದ ನೊಂದುಕೊಂಡಿರುವ ದಿಲೀಪ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸ್ಥಳಿಯರು ನೋಡಿ ತಕ್ಷಣ ಶಿಕಾರಿಪುರ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರೂ ದಿಲೀಪ್ ಬದುಕಲಿಲ್ಲ. ಸಾಯುವ ಮುನ್ನ ವಿಡಿಯೋ ರೆಕಾರ್ಡ್ ಮಾಡಿದ್ದು, ಯುವತಿಯ ಹೆಸರು ಹೇಳಿ ಆಕೆ ನನಗೆ ಮೋಸ ಮಾಡಿದ್ದಾಳೆ ನನ್ನ ಸಾವಿಗೆ ಯುವತಿ ಮತ್ತು ಅವಳ ಕುಟುಂಬದವರೇ ಕಾರಣ ಎಂದು ಹೇಳಿದ್ದಾರೆ.
ಇನ್ನು ಈ ಬಗ್ಗೆ ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.