ಶಿವಮೊಗ್ಗ, ಜೂ 27 (DaijiworldNews/MS): 2023 ರ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗಲಿದ್ದು , ಹೀಗಾಗಿ ನಾನೇ ಮತ್ತೆ ರಾಜ್ಯದ ಮುಖ್ಯಮಂತ್ರಿಯಾಗುತ್ತೇನೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಭವಿಷ್ಯ ನುಡಿದಿದರು.
ಶಿವಮೊಗ್ಗದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಂದಿನ ವಿಧಾನ ಸಭೆ ಚುನಾವಣೆಯಲ್ಲಿ ಜೆಡಿಎಸ್ ಗೆ ಸಂಪೂರ್ಣ ಬಹುಮತ ಸಿಗುವ ವಿಶ್ವಾಸ ವ್ಯಕ್ತಪಡಿಸಿದರು.
’ನನ್ನ ಮೇಲೆ ಭಗವಂತನ ಅನುಗ್ರಹವಿದೆ. ಹೀಗಾಗಿ ರಾಜ್ಯದ ನೊಂದ ಜನರನ್ನು ರಕ್ಷಿಸುವ ಸಲುವಾಗಿ ಮತ್ತೆ ನಾನೇ ಮುಖ್ಯಮಂತ್ರಿಯಾಗುವ ವಿಶ್ವಾಸವಿದೆ’ಎಂದು ಹೇಳಿದರು.
2023ರ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರುವ ಸಲುವಾಗಿಯೇ ಆಗಸ್ಟ್ ನಿಂದ ʼಪಂಚರತ್ನʼ ರಥಯಾತ್ರೆ ಆರಂಭಿಸುತ್ತೇವೆ. ಈ ರಥಯಾತ್ರೆ ಮುಖೇನ ರಾಜ್ಯದ ಜನತೆ ನಮ್ಮನ್ನು ಆಶೀರ್ವದಿಸುವ ಭರವಸೆ ಇದೆ ಎಂದು ಹೇಳಿದರು.