ಪಠಾಣ್ಕೋಟ್ ಜೂ 28 (DaijiworldNews/MS): ಸೇನಾ ಯೋಧನೊಬ್ಬ ತನ್ನ ಇಬ್ಬರು ಸಹೋದ್ಯೋಗಿಗಳನ್ನು ಗುಂಡಿಕ್ಕಿ ಕೊಂದಿರುವ ಘಟನೆ ಸೋಮವಾರ ಪಂಜಾಬ್ನ ಪಠಾಣ್ಕೋಟ್ ಜಿಲ್ಲೆಯ ಮಿರ್ಥಾಲ್ ಕಂಟೋನ್ಮೆಂಟ್ನಲ್ಲಿ ನಡೆದಿದೆ.
ಪಶ್ಚಿಮ ಬಂಗಾಳ ಮತ್ತು ಮಹಾರಾಷ್ಟ್ರದ ಇಬ್ಬರು ಯೋಧರ ಮೇಲೆ 22 ವರ್ಷದ ಯೋಧ ಗುಂಡು ಹಾರಿಸಿದ್ದಾರೆ. ಈತ ಕಳೆದ ನಾಲ್ಕು ವರ್ಷಗಳಿಂದ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಘಟನೆ ಬಳಿಕ ಯೋಧ ಸ್ಥಳದಿಂದ ಪರಾರಿಯಾಗಿದ್ದು ಆತನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಘಟನೆ ಬಗ್ಗೆ ಇತರೆ ಸೈನಿಕರು ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿ ಗಾಯಾಳುಗಳನ್ನು ಪಠಾಣ್ಕೋಟ್ನ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದರೆ ಅಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದರು ಎನ್ನಲಾಗುತ್ತಿದೆ.
ಗುಂಡಿನ ದಾಳಿಗೆ ಕಾರಣವೇನು ಎಂದು ತಿಳಿಯಲು ಬಂದಿಲ್ಲ. ಆದರೆ ಯೋಧನ ವಿರುದ್ಧ ಐಪಿಸಿ ಮತ್ತು ಶಸ್ತ್ರಾಸ್ತ್ರ ಕಾಯ್ದೆಯ ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ ಕೊಲೆ ಪ್ರಕರಣ ದಾಖಲಿಸಲಾಗಿದೆ ಎನ್ನಲಾಗುತ್ತಿದೆ.