ಬೆಂಗಳೂರು, ಜೂ 28 (DaijiworldNews/HR): 40% ಕಮಿಷನ್ ಆರೋಪ ಇದೀಗ ಮತ್ತೊಂದು ತಿರುವು ಪಡೆದುಕೊಂಡಿದ್ದು, ಈ ಕುರಿತಾಗಿ ಪ್ರಧಾನಿ ಕಾರ್ಯಾಲಯ ಮಾಹಿತಿ ಕೇಳಿದೆ.
ಪ್ರಧಾನಿ ಕಚೇರಿಯಿಂದ 40% ಕಮೀಷನ್ ಆರೋಪ ಮಾಡಿದ್ದ ಕಂಟ್ರಾಕ್ಟರ್ ಅಸೋಸಿಯೇಷನ್ ಅಧ್ಯಕ್ಷ ಕೆಂಪಣ್ಣ ಅವರಿಗೆ ಮಾಹಿತಿ ನೀಡಲು ಸೂಚನೆ ನೀಡಿದೆ.
ಇನ್ನು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಬರುವ ಮುನ್ನ ನಡೆದ ಕಳಪೆ ರಸ್ತೆ ಕಾಮಗಾರಿಯ ಬಗ್ಗೆಯೂ ಪ್ರಧಾನಿ ಕಾರ್ಯಾಲಯ ವರದಿ ತರಿಸಿಕೊಂಡಿದ್ದು, ಈ ಬಗ್ಗೆನೂ ತನಿಖೆ ನಡೆಯುವ ಸಾಧ್ಯತೆಯಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ, ನನಗೆ ಪ್ರಧಾನಿಯವರ ಕಚೇರಿಯಿಂದ ಕರೆ ಬಂದಿಲ್ಲ. ಯಾವುದೇ ನೊಟೀಸ್ ಕೂಡ ಬಂದಿಲ್ಲ. ನಾನು ಕೆಲಸ ಮೇಲೆ ಮೈಸೂರಿಗೆ ಬಂದಿದ್ದೆ. ನನ್ನ ಆಫೀಸಿಗೆ ಒಬ್ಬರು ಹೋಗಿದ್ದಾರೆ. ಕೆಲವು ದಾಖಲೆಗಳನ್ನ ಕೇಳಿದ್ದಾರೆ ಎಂದರು.