ನವದೆಹಲಿ, ಜೂ 28 (DaijiworldNews/HR): 9 ಪ್ರಯಾಣಿಕರನ್ನು ಹೊತ್ತ ಹೆಲಿಕಾಪ್ಟರ್ ಅರೇಬಿಯನ್ ಸಮುದ್ರದ ಹತ್ತಿರದಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದು, ನಾಲ್ವರನ್ನು ರಕ್ಷಿಸಲಾಗಿದೆ ಎಂದು ತಿಳಿದು ಬಂದಿದೆ.
ಈ ಕುರಿತು ಟ್ವೀಟರ್ನಲ್ಲಿ ಮಾಹಿತಿ ಹಂಚಿಕೊಂಡಿದ್ದು, 7 ಪ್ರಯಾಣಿಕರು ಮತ್ತು 2 ಪೈಲಟ್ಗಳನ್ನು ಹೊತ್ತ ಹೆಲಿಕಾಪ್ಟರ್ ಮುಂಬೈ ಹೈನ ಒಎನ್ಜಿಸಿ ರಿಗ್ ಸಾಗರ್ ಕಿರಣ್ ಬಳಿ ಅರಬ್ಬಿ ಸಮುದ್ರದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
ಇನ್ನು ನಾಲ್ವರನ್ನು ರಕ್ಷಿಸಲಾಗಿದ್ದು,ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ ಎಂದು ಆಯಿಲ್ ಅಂಡ್ ನ್ಯಾಚುರಲ್ ಗ್ಯಾಸ್ ಕಾರ್ಪೊರೇಷನ್ ಲಿಮಿಟೆಡ್ ತಿಳಿಸಿದೆ.