ಉದಯಪುರ, ಜೂ 29 (DaijiworldNews/MS): ಬಿಜೆಪಿ ಮಾಜಿ ವಕ್ತಾರೆ ನೂರುಪ್ ಶರ್ಮಾ ಆಡಿದ್ದ ಮಾತುಗಳನ್ನು ಬೆಂಬಲಿಸಿ ಪೇಸ್ ಬುಕ್ ಹಾಕಿಕೊಂಡಿದ್ದರು ಎಂಬ ಕಾರಣಕ್ಕೆ ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಕನ್ಹಯ್ಯ ಲಾಲ್ ಎಂಬುವವರನ್ನು ಇಬ್ಬರು ದುಷ್ಕರ್ಮಿಗಳು ಮಂಗಳವಾರ ಕತ್ತು ಸೀಳಿ ಹತ್ಯೆ ಮಾಡಿದ್ದಾರೆ. ಈ ಘಟನೆ ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದು, ಅಲ್ಲದೆ ರಾಜಸ್ಥಾನ ಉದ್ವಿಗ್ನಗೊಂಡಿದ್ದು, ಜತೆಗೆ ದೇಶದ ವಿವಿಧೆಡೆ ಪ್ರತಿಭಟನೆ ಆರಂಭವಾಗಿದೆ. ಇನ್ನೊಂದೆಡೆ ರಾಜಸ್ಥಾನದಾದ್ಯಂತ 1 ತಿಂಗಳ ಕಾಲ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಏನಾಗಿತ್ತು?
40 ವರ್ಷದ ಟೈಲರ್ ಕನ್ಹಯ್ಯಾಲಾಲ್ ತೇಲಿ ಅವರು, ಧನ್ಮಂಡಿಯ ಭೂತಮಹಲ್ ಬಳಿ ಸುಪ್ರೀಂ ಟೈಲರ್ಸ್ ಎಂಬ ಅಂಗಡಿ ಇಟ್ಟುಕೊಂಡಿದ್ದರು. ಮಂಗಳವಾರ ಮಧ್ಯಾಹ್ನ 2.30ರ ಸುಮಾರಿಗೆ ಬೈಕ್ನಲ್ಲಿ ಇಬ್ಬರು ದುಷ್ಕರ್ಮಿಗಳು ಬಂದು ಬಟ್ಟೆಯ ಅಳತೆ ಕೊಡುವ ನೆಪದಲ್ಲಿ ಅಂಗಡಿ ಪ್ರವೇಶಿಸಿದ್ದಾರೆ. ಈ ಪೈಕಿ ಓಬ್ಬಾತ ವಿಡಿಯೋ ಕಾಲ್ ಮಾಡುವಂತೆ ನಟಿಸಿ ವಿಡಿಯೋ ಮಾಡುತ್ತಿದ್ದ. ಮತ್ತೊರ್ವ ಅಳತೆ ತೆಗೆಯುವ ನೆಪದಲ್ಲಿ ಬಂದು ಶಿರಚ್ಛೇದ ಮಾಡಿದ ಹತ್ಯೆ ಮಾಡಿದ್ದಾನೆ. ಇದರಿಂದ ಟೈಲರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಇಸಿಸ್ ಉಗ್ರರ ಮಾದರಿಯಲ್ಲಿ ವ್ಯಕ್ತಿಯ ಶಿರಚ್ಛೇದ ಮಾಡಿದ ಹತ್ಯೆ ಬಳಿದ ಉಪಯಪುರದಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದ್ದು, 24 ಗಂಟೆಗಳ ಕಾಲ ಇಂಟರ್ನೆಟ್ ಸೇವೆಗಳನ್ನು ಜಾರಿ ಮಾಡಲಾಗಿದೆ. ಮುಂದಿನ ಆದೇಶದವರೆಗೆ ಪೊಲೀಸ್ ಅಧಿಕಾರಿಗಳ ರಜೆಗಳನ್ನು ರದ್ದುಗೊಳಿಸಲಾಗಿದ್ದು, ಯಾವುದೇ ರೀತಿಯ ಆಕ್ಷೇಪಾರ್ಹ ವಿಡಿಯೋ ಪ್ರಸಾರ ಮಾಡಿದಂತೆ ಎಚ್ಚರಿಕೆ ನೀಡಲಾಗಿದೆ.
ಈ ಹಂತಕರು ವಿಡಿಯೋ ಮಾಡಿ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡುವ ಬೆದರಿಕೆ ಹಾಕಿದ್ದಾರೆ. ಘಟನೆ ಸಂಬಂಧ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಇವರಲ್ಲಿ ಓರ್ವನನ್ನು ರಿಯಾಜ್ ಎಂದು ಗುರುತಿಸಲಾಗಿದೆ
ಇನ್ನು ಟೈಲರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಲಕ್ಷ್ಯದ ಆರೋಪದಡಿ ಉದಯಪುರದ ಧನ್ ಮಂಡಿ ಪೊಲೀಸ್ ಠಾಣೆಯ ಎಎಸ್ಐ ಒಬ್ಬರನ್ನು ಅಮಾನತು ಮಾಡಲಾಗಿದೆ.