ಬೆಂಗಳೂರು, ಜೂ 29 (DaijiworldNews/HR): ಆರೋಪಿಗಳನ್ನು ಬಂಧಿಸುವಾಗ ಕೈ ಕೋಳ ತೊಡಿಸುವ ಪೊಲೀಸರು ಬಾಡಿ ಕ್ಯಾಮರಾ ಧರಿಸಿರಲೇಬೇಕು ಎಂದು ಹೈಕೋರ್ಟ್ ಆದೇಶ ನೀಡಿದೆ.
ಪೊಲೀಸರು ಇನ್ನು ಆರೋಪಿಗಳನ್ನು ಬಂಧಿಸುವಾಗ ಬ್ಯಾಡಿ ಕ್ಯಾಮರಾ ಧರಿಸಿ ಬಂಧಿಸುವ ್ಪ್ರಕ್ರಿಯೆಯನ್ನು ಸಂಪೂರ್ಣವಾಗಿ ವಿಡಿಯೋದಲ್ಲಿ ದಾಖಲಿಸಬೇಕಾಗುತ್ತದೆ.
ಚೆಕ್ಬೌನ್ಸ್ ಪ್ರಕರಣದಲ್ಲಿ ಬಂಧಿತ ವ್ಯಕ್ತಿಯನ್ನು ಕಾನೂನುಬಾಹಿರವಾಗಿ ಕೈಕೋಳ ಹಾಕಿದ್ದಕ್ಕಾಗಿ ಸರ್ಕಾರಕ್ಕೆ 2 ಲಕ್ಷ ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ 30 ವರ್ಷದ ಸುಪ್ರಿತ್ ಇಶ್ವತ್ ದಿವಟೆ, ಸಾರ್ವಜನಿಕ ಸ್ಥಳದಲ್ಲಿ ಕಾನೂನು ಬಾಹಿರವಾಗಿ ಕೈಕೋಳ ಹಾಕಿದ್ದಕ್ಕಾಗಿ ಪರಿಹಾರ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯಪೀಠ ಈ ಆದೇಶ ನೀಡಿದೆ.