ಬೆಂಗಳೂರು, ಜೂ 29 (DaijiworldNews/HR): ಬಿಜೆಪಿ ಮಾಜಿ ವಕ್ತಾರೆ ನೂರುಪ್ ಶರ್ಮಾ ಆಡಿದ್ದ ಮಾತುಗಳನ್ನು ಬೆಂಬಲಿಸಿ ಪೇಸ್ ಬುಕ್ ಹಾಕಿಕೊಂಡಿದ್ದರು ಎಂಬ ಕಾರಣಕ್ಕೆ ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಕನ್ಹಯ್ಯ ಲಾಲ್ ಎಂಬವರನ್ನು ಹತ್ಯೆ ಮಾಡಿರುವ ಬೆನ್ನಲ್ಲೇ ಪ್ರತಿಭಟನೆಗಳು ನಡೆಯುತ್ತಿದ್ದು, ಮುಂಜಾಗೃತಾ ಕ್ರಮವಾಗಿ ಕರ್ನಾಟಕದಲ್ಲಿಯೂ ಹೈ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ದಿ ಸೂಚಿಸಿದ್ದು, ಬೆಂಗಳೂರಿನಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಬೇಕು ಎಂದು ಎಚ್ಚರಿಕೆ ನೀಡಲಾಗಿದೆ.
ಇನ್ನು ಉದಯಪುರದಲ್ಲಿ ಟೈಲರ್ ಹತ್ಯೆ ಮಾಡಿದ್ದ ಇಬ್ಬರು ಯುವಕರು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿದ್ದು, ಪ್ರಧಾನಿ ಮೋದಿ ಹತ್ಯೆ ಮಾಡುವುದಾಗಿ ಬೆದರಿಕೆಯೊಡ್ಡಿದ್ದಾರೆ.