ಕೋಲ್ಕತ್ತ, ಜೂ 29 (DaijiworldNews/DB): ಹಿಂಸಾಚಾರ ಮತ್ತು ಉಗ್ರವಾದವನ್ನು ಎಂದಿಗೂ ಒಪ್ಪಲಾಗದು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಕನ್ಹಯ್ಯ ಲಾಲ್ ಎಂಬುವವರನ್ನು ಇಬ್ಬರು ದುಷ್ಕರ್ಮಿಗಳು ಕತ್ತು ಸೀಳಿ ಹತ್ಯೆ ಮಾಡಿರುವ ಘಟನೆಯನ್ನು ಟ್ವೀಟ್ ಮೂಲಕ ಖಂಡಿಸಿರುವ ಅವರು, ಯಾವುದೇ ಸಮಸ್ಯೆಯನ್ನು ಹಿಂಸೆ ಮತ್ತು ಉಗ್ರವಾದದ ಮೂಲಕ ಬಗೆಹರಿಸಲಾಗುವುದಿಲ್ಲ. ಹಿಂಸೆ ಮತ್ತು ಭಯೋತ್ಪಾದನೆಯನ್ನು ಒಪ್ಪಲಾಗದು. ಉದಯಪುರದಲ್ಲಿ ನಡೆದ ಹತ್ಯೆ ಖಂಡನೀಯ. ಸರ್ಕಾರ ದುಷ್ಕರ್ಮಿಗಳ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಎಲ್ಲರೂ ಶಾಂತಿ, ಸುವ್ಯವಸ್ಥೆ ಕಾಪಾಡಲು ಸಹಕರಿಸಬೇಕು ಎಂದಿದ್ದಾರೆ.
ಸಾಮಾಜಿಕ ಮಾಧ್ಯಮಗಳಲ್ಲಿ ವಿವಾದಾತ್ಮಕ ಪೋಸ್ಟ್ ಹಾಕಿದ್ದರು ಎಂಬ ಕಾರಣಕ್ಕಾಗಿ ಮಂಗಳವಾರ ಇಬ್ಬರು ದುಷ್ಕರ್ಮಿಗಳು ಟೈಲರ್ ಕನ್ಹಯ್ಯಾ ಲಾಲ್ ಅವರನ್ನು ಕತ್ತು ಸೀಳಿ ಹತ್ಯೆ ಮಾಡಿದ್ದರು.