ನವದೆಹಲಿ, ಜೂ 29 (DaijiworldNews/HR): ಮಹಾರಾಷ್ಟ್ರದಲ್ಲಿ ನಾಳೆ ನಡೆಯುವ ವಿಶ್ವಾಸಮತ ಪರೀಕ್ಷೆಯಲ್ಲಿ ಮತ ಚಲಾಯಿಸಲು ಅನುಮತಿ ಕೋರಿ ಜೈಲಿನಲ್ಲಿರುವ ನವಾಬ್ ಮಲಿಕ್ ಮತ್ತು ಅನಿಲ್ ದೇಶಮುಖ್ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ನವಾಬ್ ಮಲಿಕ್ ಮತ್ತು ಅನಿಲ್ ದೇಶಮುಖ್ ಅವರ ಅರ್ಜಿಗಳನ್ನು ಆಲಿಸಲು ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದ್ದು, ಇಂದು ಸಂಜೆ 5:30ಕ್ಕೆ ವಿಚಾರಣೆ ನಡೆಸಲಿದೆ ಎಂದು ತಿಳಿದು ಬಂದಿದೆ.
ಇನ್ನು ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಜೆಬಿ ಪಾರ್ದಿವಾಲಾ ಅವರ ರಜಾಕಾಲದ ಪೀಠಕ್ಕೆ ವಕೀಲ ಸುಧಾಂಶು ಎಸ್ ಚೌಧರಿ ಅವರು ಇಬ್ಬರು ಶಾಸಕರು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ಅಪರಾಧ ಪ್ರಕರಣಗಳ ಅಡಿ ಜೈಲಿನಲ್ಲಿದ್ದಾರೆ ಎಂದರು.
ಗುರುವಾರ ಬೆಳಗ್ಗೆ 11 ಗಂಟೆಗೆ ಬಹುಮತ ಸಾಬೀತುಪಡಿಸುವಂತೆ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರು ಎಂವಿಎ ಸರ್ಕಾರಕ್ಕೆ ಸೂಚಿಸಿದ್ದಾರೆ.