ಬೆಂಗಳೂರು, ಜೂ 29 (DaijiworldNews/HR): ವಿದ್ಯುತ್ ದರ ಹೆಚ್ಚಳ ಮಾಡುವುದು ರಾಜ್ಯ ಸರ್ಕಾರವಲ್ಲ. ಕೆ ಇ ಆರ್ ಸಿ ನಿರ್ಧಾರ ಎಂದು ವಿದ್ಯುತ್ ದರ ಏರಿಕೆ ವಿಚಾರವಾಗಿ ಇಂಧನ ಸಚಿವ ಸುನೀಲ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಜುಲೈ 1ರಿಂದ 6 ತಿಂಗಳವರೆಗೆ ಪ್ರತಿ ಯೂನಿಟ್ ಗೆ 19ರಿಂದ 31 ಪೈಸೆವರೆಗೆ ಹೆಚ್ಚುವರಿ ದರವನ್ನು ಇಂಧನ ಹೊಂದಾಣಿಕೆ ವೆಚ್ಚ ರೂಪದಲ್ಲಿ ಸಂಗ್ರಹ ಮಾಡಲು ಅವಕಾಶ ಕಲ್ಪಿಸಿ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ-ಕೆ ಇ ಆರ್ ಸಿ ಆದೇಶ ಹೊರಡಿಸಿದೆ.
ಇನ್ನು ಈ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವ ಸುನೀಲ್ ಕುಮಾರ್, ವಿದ್ಯುತ್ ದರ ಹೆಚ್ಚಳ ಮಾಡುವುದು ರಾಜ್ಯ ಸರ್ಕಾರವಲ್ಲ, ಕೆ ಇ ಆರ್ ಸಿ. ಸಿದ್ದರಾಮಯ್ಯ ಸರ್ಕಾರದಲ್ಲಿ 2013-14ರಲ್ಲೇ ಈ ನಿರ್ಧಾರ ಕೈಗೊಳ್ಳಲಾಗಿದೆ ಅಂದಿನಿಂದ ಇಂದಿನವರೆಗೂ ಮೂರು ತಿಂಗಳಿಗೊಮ್ಮೆ ದರ ಪರಿಷ್ಕರಣೆ ಮಾಡಲಾಗುತ್ತಿದ್ದು, ಇಲ್ಲಿ ಸರ್ಕಾರದಿಂದ ಯಾವುದೇ ದರ ಹೆಚ್ಚಳ ಮಾಡಿಲ್ಲ. ಕೆ ಇ ಆರ್ ಸಿ ನಿಂದ ದರ ಹೆಚ್ಚಳ ಮಾಡಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.